ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಹಚರನನ್ನು ಶ್ರೀನಗರ ಕೇಂದ್ರಾಡಳಿತ ಪ್ರದೇಶ ಬಟ್ಮಾಲೂ ಬಸ್ ನಿಲ್ದಾಣದಲ್ಲಿ ಬಂಧಿಸಿರುವುದಾಗಿ ಶ್ರೀನಗರ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಆರೋಪಿಯನ್ನು ಯಾಸಿರ್ ಅಹ್ಮದ್ ಇಟ್ಟೂ ಎಂದು ಗುರುತಿಸಲಾಗಿದ್ದು, ಆತನಿಂದ ನಾಲ್ಕು ಸುಗಂಧ ದ್ರವ್ಯ, ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ವಶಪಡಿಸಿಕೊಳ್ಳಲಾಗಿದೆ ಎಂದು ಶ್ರೀನಗರ ಪೊಲೀಸರು ತಿಳಿಸಿದ್ದಾರೆ.
ಯಾಸಿರ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
“ಸ್ಫೋಟಕ ವಸ್ತುಗಳ ಕಾಯಿದೆ 3/5, IA, ಮತ್ತು ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯಿದೆ 7/25, 13, 23 ರ ಅಡಿಯಲ್ಲಿ ಎಫ್‌ಐಆರ್ ಅನ್ನು ಬಟ್ಮಲೂ ಪಿಎಸ್‌ನಲ್ಲಿ ನೋಂದಾಯಿಸಲಾಗಿದೆ” ಎಂದು ಶ್ರೀನಗರ ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.