ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ನಿಜಾಮಾಬಾದ್‌ನ ಬಡಾ ಬಜಾರ್ ಪ್ರದೇಶದಲ್ಲಿ ರಾಸಾಯನಿಕಗಳ ಬಾಕ್ಸ್ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೊಬ್ಬರು ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಧಾವಿಸಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಎಸ್‌ಎಚ್‌ಒ ಒನ್ ಟೌನ್ ಪೊಲೀಸ್ ಠಾಣೆ, ಸ್ಫೋಟದ ಬಗ್ಗೆ ನಮಗೆ ಮಾಹಿತಿ ಬಂದಿದೆ. ಘಟನೆಯಲ್ಲಿ ಗಾಯಗೊಂಡವರು ರಾಸಾಯನಿಕಗಳ ಪೆಟ್ಟಿಗೆಯನ್ನು ಅಲ್ಲಾಡಿಸಿದಾಗ ಸ್ಫೋಟ ಸಂಭವಿಸಿದೆ ಎಂಬ ಮಾಹಿತಿ ನೀಡಿದರು. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದರು.