Friday, August 12, 2022

Latest Posts

ಬಾರಾಮುಲ್ಲಾದಲ್ಲಿ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬೆಳಗ್ಗೆ ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ. ಈ ವೇಳೆ ಓರ್ವ ಉಗ್ರನನ್ನು ಸದೆಬಡೆಯಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಕಾಶ್ಮೀರ ಪೊಲೀಸರು, ಬಾರಮುಲ್ಲಾದಲ್ಲಿ ಉಗ್ರನೋರ್ವ ಪೊಲೀಸರನ್ನು ಗುರಿಯಾಗಿಸಿ ಗುಂಡಿನ ದಾಳಿ ಮಾಡಿದ್ದಾನೆ. ಇದಕ್ಕೆ ಪ್ರತ್ಯುತ್ತರ ನೀಡಿದ ಪೊಲೀಸರು ಹಾಗೂ ಭದ್ರತಾ ಪಡೆ ಆ ಉಗ್ರನನ್ನು ಹೊಡೆದುರುಳಿಸಿದ್ದಾರೆ.
ಆತನ ಬಳಿ ಇದ್ದ 1 ಪಿಸ್ತೂಲ್, 1 ಲೋಡೆಡ್ ಮ್ಯಾಗಜೀನ್ ಮತ್ತು 1 ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಉಗ್ರನ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss