Wednesday, August 10, 2022

Latest Posts

10 ತಿಂಗಳ ಬಳಿಕ ಕೊರೋನಾ ಸೋಂಕಿಗೆ ಭೂತಾನ್‌ನಲ್ಲಿ ಮೊದಲ ಸಾವು

ಹೊಸ ದಿಗಂತ ಆನ್ ಡೆಸ್ಕ್:

ಭೂತಾನ್‌ನಲ್ಲಿ 10 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಕೊರೋನಾ ಸೋಂಕಿಗೆ ಒಬ್ಬರು ಮೃತಪಟ್ಟಿದ್ದಾರೆ.
34 ವರ್ಷದ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದು, ಥಿಂಪುವಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಡಿ.23 ರಂದು ತಪಾಸಣೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿತ್ತು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ ಮಾರ್ಚ್‌ ತಿಂಗಳಿನಿಂದ ಭಾರತ ಮತ್ತು ಚೀನಾದಿಂದ ಬರುವ ಪ್ರಯಾಣಿಕರ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ವಿದೇಶದಿಂದ ಬಂದಿದ್ದ ಮಹಿಳೆಯೊಬ್ಬರಲ್ಲಿ ಕೋವಿಡ್‌ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಿಸೆಂಬರ್‌ ತಿಂಗಳಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್‌ಡೌನ್‌ ಜಾರಿಗೊಳಿಸಲಾಗಿತ್ತು. ಜತೆಗೆ, ಸೋಂಕಿತ ಮಹಿಳೆಯ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss