ಹೊಸದಿಗಂತ ಡಿಜಿಟಲ್ ಡೆಸ್ಕ್
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ರೋಗಿಗಳಿಗೆ ನಕಲಿ ಪ್ಲೇಟ್‌ಲೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್‌ನ ಹತ್ತು ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಪ್ರದೇಶದ ವಿವಿಧ ರಕ್ತನಿಧಿಗಳಿಂದ ಪ್ಲಾಸ್ಮಾವನ್ನು ಸಂಗ್ರಹಿಸಿ ನಂತರ ಅದನ್ನು ಪೌಚ್‌ಗಳಲ್ಲಿ ಹಾಕಿ ಪ್ಲೇಟ್‌ಲೆಟ್ ಪೌಚ್‌ಗಳಾಗಿ ಪರಿವರ್ತಿಸಿ ಮಾರಾಟ ಮಾಡುತ್ತಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ಹೇಳಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪಾಂಡೆ ತಿಳಿಸಿದ್ದಾರೆ. ಆರೋಪಿಗಳ ವಶದಲ್ಲಿ ಈ ನಕಲಿ ಪ್ಲೇಟ್‌ಲೆಟ್ ಪೌಚ್‌ಗಳನ್ನು ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಕ್ರಮವಾಗಿ ರಕ್ತ ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಕೆಲ ದಿನಗಳ ಹಿಂದೆ 12 ಮಂದಿಯನ್ನು ಬಂಧಿಸಲಾಗಿತ್ತು ಎಂದು ತಿಳಿಸಿದರು.
ನಗರದಲ್ಲಿ ಖಾಸಗಿ ಆಸ್ಪತ್ರೆಯೊಂದು ಡೆಂಗ್ಯೂ ರೋಗಿಯೊಬ್ಬರಿಗೆ ಮೋಸಂಬಿ ರಸವನ್ನು ಪ್ಲೇಟ್‌ಲೆಟ್ ರೂಪದಲ್ಲಿ ರವಾನಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಡೆಂಗ್ಯೂ ರೋಗಿಗೆ ರಕ್ತದ ಪ್ಲೇಟ್‌ಲೆಟ್‌ಗಳ ಬದಲಿಗೆ ಹಣ್ಣಿನ ರಸವನ್ನು (ಮೋಸಂಬಿ ಜ್ಯೂಸ್) ವರ್ಗಾಯಿಸಿದ ಆರೋಪದ ಮೇಲೆ ಪ್ರಯಾಗ್‌ರಾಜ್‌ನಲ್ಲಿರುವ ಖಾಸಗಿ ಆಸ್ಪತ್ರೆಯನ್ನು ಗುರುವಾರ ಸೀಲ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ