ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ ಪತ್ನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಕೇಂದ್ರ ಸರ್ಕಾರದಿಂದ ರಿನಿಕಿ ಅವರ ಕಂಪನಿಯು 10 ಕೋಟಿ ರೂ. ಸಬ್ಸಿಡಿ ಪಡೆದಿದೆ ಎಂದು ಗೊಗೊಯ್ ಆರೋಪಿಸಿದ್ದರು.

ಇದೀಗ ಗುವಾಹಟಿಯ ಕಾಮ್ರೂಪ್ ಮೆಟ್ರೋಪಾಲಿಟನ್ ಸಿವಿಲ್ ನ್ಯಾಯಾಲಯದಲ್ಲಿ ರಿನಿಕಿ ಭುಯಾನ್ ಪರ ವಕೀಲರು ಮೊಕದ್ದಮೆ ದಾಖಲಿಸಿದ್ದಾರೆ .

ತನ್ನ ಕಂಪನಿ ಪ್ರೈಡ್ ಈಸ್ಟ್ ಎಂಟರ್‌ಟೈನ್‌ಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯೆಯಾಗಿ, ರಿನಿಕಿ ಭುಯಾನ್ ಶರ್ಮಾ ಸೆಪ್ಟೆಂಬರ್ 14 ರಂದು ಟ್ವೀಟ್ ಮಾಡಿದ್ದರು. ಪ್ರೈಡ್ ಈಸ್ಟ್ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ 2006 ರಿಂದ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಾರ ಹಿತಾಸಕ್ತಿಗಳೊಂದಿಗೆ ಅಸ್ತಿತ್ವದಲ್ಲಿದೆ ಇದೊಂದು ಸ್ವತಂತ್ರ ಸಂಸ್ಥೆಯಾಗಿದೆ ಎಂದರು.

ಪ್ರಸ್ತುತ ಸಂದರ್ಭದಲ್ಲಿ, ಪ್ರಧಾನ ಮಂತ್ರಿ ಕಿಸಾನ್ ಸಂಪದಾ ಯೋಜನೆಗೆ ಸಂಬಂಧಿಸಿದಂತೆ, ಪ್ರೈಡ್ ಈಸ್ಟ್ ಎಂಟರ್‌ಟೈನ್‌ಮೆಂಟ್ಸ್ ಪ್ರೈವೇಟ್ ಲಿಮಿಟೆಡ್, ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರೈಸಿದ್ದರೂ, ಸರ್ಕಾರದ ಒಂದು ಪೈಸೆಯ ಸಬ್ಸಿಡಿಯನ್ನು ಕ್ಲೈಮ್ ಮಾಡಿಲ್ಲ ಅಥವಾ ಸ್ವೀಕರಿಸಿಲ್ಲ ಎಂದು ಭೂಯಾನ್ ಶರ್ಮಾ ಹೇಳಿದರು.

ಈ ತಿಂಗಳ ಆರಂಭದಲ್ಲಿ, ಗೌರವ್ ಗೊಗೊಯ್ ಅವರು ಪ್ರಧಾನ ಮಂತ್ರಿ ಕಿಸಾನ್ ಸಂಪದಾ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ 10 ಕೋಟಿ ರೂಪಾಯಿಗಳ ಸಬ್ಸಿಡಿ ಪಡೆಯಲು ಮುಖ್ಯಮಂತ್ರಿ ಶರ್ಮಾ ತಮ್ಮ ಪತ್ನಿಯ ಕಂಪನಿಗೆ ಸಹಾಯ ಮಾಡಿದ್ದಾರೆ ಎಂದು ಸರಣಿ ಟ್ವೀಟ್‌ಗಳಲ್ಲಿ ಆರೋಪಿಸಿದ್ದರು.

ಮುಖ್ಯಮಂತ್ರಿ ಶರ್ಮಾ ಅವರ ರಾಜೀನಾಮೆ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಒಡೆತನದ ಕಂಪನಿಯಿಂದ ಸರ್ಕಾರಿ ಅನುದಾನ ಮತ್ತು ಭೂಸ್ವಾಧೀನದ ತನಿಖೆಗೆ ಗೊಗೊಯ್ ಒತ್ತಾಯಿಸಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!