ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಯನಗರ ಬಿಟ್ಟು ಬೆಂಗಳೂರಿನ ಉಳಿದ ರಸ್ತೆಗಳ ಅಭಿವೃದ್ಧಿಗೆ 10 ಕೋಟಿ ರೂ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಚರ್ಚೆಗೆ ಆಹ್ವಾನ ನೀಡಿದಂತಾಗಿದೆ.
ಬಿಜೆಪಿ ಶಾಸಕ ಪ್ರತಿನಿಧಿಸುವ ಜಯನಗರ ವಿಧಾನಸಭಾ ಕ್ಷೇತ್ರವನ್ನು ಈ ಅನುದಾನ ಹಂಚಿಕೆಯಿಂದ ಹೊರಗಿಟ್ಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಸರ್ಕಾರದ ಕ್ರಮಗಳು ಸೇಡಿನ ರಾಜಕಾರಣಕ್ಕೆ ಸಮಾನವಾಗಿದೆ, ಕಾಂಗ್ರೆಸ್‌ಗೆ ಮತ ಹಾಕದ ನಾಗರಿಕರನ್ನು ಸರ್ಕಾರ ಶಿಕ್ಷಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
“ಡಿಸಿಎಂ ಬ್ರಾಂಡ್ ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ. ಅವರ ಬ್ರಾಂಡ್ ಬೆಂಗಳೂರು ಕನಸು ಜಯನಗರವನ್ನು ಹೊರತುಪಡಿಸುತ್ತದೆಯೇ?ʼʼ ಎಂದು ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಪ್ರಶ್ನಿಸಿದ್ದಾರೆ. ತಮ್ಮ ಕ್ಷೇತ್ರಕ್ಕೆ ಉದ್ಯಾನವನಗಳು, ರಸ್ತೆಗಳು ಮತ್ತು ಚರಂಡಿಗಳನ್ನು ನಿರ್ವಹಿಸಲು ಹಣದ ಅಗತ್ಯವಿದೆ ಎಂದು ಹೇಳಿದ್ದಾರೆ.
ಇದು ಕಾಂಗ್ರೆಸ್ ಸರ್ಕಾರದ ಸೇಡಿನ ರಾಜಕಾರಣವನ್ನು ಎತ್ತಿ ತೋರಿಸುತ್ತದೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ಹಾಗೂ ಬೆಂಗಳೂರು ನಗರ ಜಿಲ್ಲೆಯ ಭಾಗವಾಗಿರುವ ಆನೇಕಲ್‌ಗೆ 5 ಕೋಟಿ ರೂ. ಸೇರಿದಂತೆ ಒಟ್ಟು 265 ಕೋಟಿ ರೂ ಅನುದಾನ ಮಂಜೂರು ಮಾಡಲು ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.