Thursday, March 23, 2023

Latest Posts

ಈ ಬಾರಿಯ ಬಜೆಟ್ ನಲ್ಲಿ ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ಅನುದಾನ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಜೆಟ್ (Budget 2023) ನಲ್ಲಿ ಆರ್ಯ ವೈಶ್ಯ ನಿಗಮ ಮಂಡಳಿ ಮತ್ತು ಬ್ರಾಹ್ಮಣ ನಿಗಮ ಮಂಡಳಿಗೆ (Brahmins Corporation Boardತಲಾ 10 ಕೋಟಿ ಅನುದಾನ ನೀಡುತ್ತೇನೆ ಎಂದು ಸಿಎಂ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‌ನ (JDS) ಸದಸ್ಯರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ಆರ್ಯ ವೈಶ್ಯ ನಿಗಮ ಮತ್ತು ಬ್ರಾಹ್ಮಣ ನಿಗಮಕ್ಕೆ ಸರಿಯಾಗಿ ಅನುದಾನ ನೀಡುತ್ತಿಲ್ಲ. ಹೆಚ್ಚು ಅನುದಾನಕ್ಕೆ ಮನವಿ ಮಾಡಿದ್ದೇವೆ. ಆದರೂ ಅನುದಾನ ಕೊಟ್ಟಿಲ್ಲ. ಎರಡು ಸಮಾಜಕ್ಕೂ ಈ ಸರ್ಕಾರ ಅನ್ಯಾಯ ಮಾಡಿದೆ. ಕುಮಾರಸ್ವಾಮಿ (HD Kumaraswamy) ಸಿಎಂ ಆಗಿದ್ದಾಗ 100 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು ಎಂದರು.

ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ಬ್ರಾಹ್ಮಣ ನಿಗಮದಲ್ಲಿ 6 ಕೋಟಿ ಇದೆ. ಇದನ್ನ ಬಳಕೆ ಮಾಡಿಕೊಳ್ಳಿ. ಆರ್ಯ ವೈಶ್ಯ ನಿಗಮದಲ್ಲಿ ಅನುದಾನ ಇದೆ. ಹೆಚ್ಚುವರಿ ಅನುದಾನ ಕೊಡ್ತೀವಿ. ಆರ್ಯ ವೈಶ್ಯ ನಿಗಮ ಉತ್ತಮವಾಗಿ ಕೆಲಸ ಮಾಡುತ್ತಿದೆ. ಎಲ್ಲವನ್ನೂ ಆನ್‌ಲೈನ್ ವ್ಯವಸ್ಥೆಯಲ್ಲಿ ಮಾಡುತ್ತಿದೆ. ಆರ್ಯ ವೈಶ್ಯ ನಿಗಮ ಮತ್ತು ಬ್ರಾಹ್ಮಣ ನಿಗಮಕ್ಕೆ ಈ ಬಜೆಟ್ ನಲ್ಲಿ ತಲಾ 10 ಕೋಟಿ ನೀಡುತ್ತೇನೆ ಎಂದು ಭರವಸೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!