10 ಕೋಟಿ ರೂ. ಮೌಲ್ಯದ ಮಾದಕವಸ್ತು ಅಕ್ರಮ ಸಾಗಾಟ.. ವಿದೇಶಿ ಮಹಿಳೆ ಅಂದರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

10 ಕೋಟಿ ರೂ. ಮೌಲ್ಯದ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನು ಸಿಸಿಬಿ ಮತ್ತು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ. ಬಂಧಿತ ಮಹಿಳೆ ಕಳೆದ 3 ವರ್ಷದ ಹಿಂದೆ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದಳು. ದೆಹಲಿಯಿಂದ ಬೆಂಗಳೂರಿಗೆ ಬಸ್ ಮೂಲಕ ಮಾದಕವಸ್ತು ಸಾಗಾಟ ಮಾಡುತ್ತಿದ್ದಳು ಎನ್ನಲಾಗಿದೆ.

ಬಂಧಿತಳಿಂದ 5 ಕೆಜಿ 325ಗ್ರಾಂ ಎಂಡಿಎಂಎ ಹಾಗೂ ಆ್ಯಪಲ್ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದ್ದು, ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!