Saturday, December 9, 2023

Latest Posts

ನ್ಯೂಸ್‌ಕ್ಲಿಕ್ ಸಂಸ್ಥಾಪಕ, ಎಚ್ಆರ್ ಮುಖ್ಯಸ್ಥರಿಗೆ 10 ದಿನ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್ (NewsClick) ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ (Prabir Purkayastha) ಮತ್ತು ಪೋರ್ಟಲ್‌ನ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ (Amit Chakraborty) ಅವರನ್ನು ದೆಹಲಿ ನ್ಯಾಯಾಲಯ ಮಂಗಳವಾರ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಚೀನಾ ಪರ ಪ್ರಚಾರಕ್ಕಾಗಿ ಪೋರ್ಟಲ್‌ಗೆ ಹಣ ಬಂದಿದೆ ಎಂಬ ಆರೋಪದ ಮೇಲೆ ಅಕ್ಟೋಬರ್ 3 ರಂದು ದೆಹಲಿ ಪೊಲೀಸ್ ವಿಶೇಷ ಘಟಕ ಇಬ್ಬರನ್ನು ಬಂಧಿಸಿತ್ತು.

ಕಳೆದ ವಾರ ದೆಹಲಿ ಹೈಕೋರ್ಟ್ ವೆಬ್‌ಸೈಟ್ ಸಂಸ್ಥಾಪಕ ಮತ್ತು ಮಾನವ ಸಂಪನ್ಮೂಲ ಮುಖ್ಯಸ್ಥರಿಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ್ದು, ಅವರ ವಿರುದ್ಧದ ಆರೋಪಗಳು ತಕ್ಷಣದ ಪರಿಹಾರವನ್ನು ನೀಡಬಹುದಾದಂತಹ ಸ್ವರೂಪದಲ್ಲಿರಲಿಲ್ಲ ಎಂದು ಹೇಳಿತ್ತು.

ಕಳೆದ ಮಂಗಳವಾರ ಕನಿಷ್ಠ 400 ದೆಹಲಿ ಪೊಲೀಸ್ ಅಧಿಕಾರಿಗಳು ದೆಹಲಿ-ಎನ್‌ಸಿಆರ್ ಮತ್ತು ಮುಂಬೈನ 30 ಸ್ಥಳಗಳಲ್ಲಿ ದಾಳಿ ನಡೆಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!