March 15, 2026
Sunday, March 15, 2026
spot_img

10 ದಿನ ಅಷ್ಟೇ ಟೈಮ್, ಇಲ್ಲಾಂದ್ರೆ ಯುದ್ಧಾನೇ! ಇರಾನ್​ಗೆ ಗಡುವು ನೀಡಿದ ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತೀವ್ರಗೊಂಡಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ 10 ದಿನಗಳ ಗಡುವು ನೀಡಿರುವುದಾಗಿ ಹೇಳಲಾಗಿದೆ. ಈ ಅವಧಿಯಲ್ಲಿ ಒಪ್ಪಂದಕ್ಕೆ ಬರದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಗಾಜಾ ಶಾಂತಿ ಸಭೆಯಲ್ಲಿ ಮಾತನಾಡಿದ ಟ್ರಂಪ್, ಮುಂದಿನ ಕೆಲ ದಿನಗಳು ನಿರ್ಣಾಯಕವಾಗಿವೆ ಎಂದು ಹೇಳಿದ್ದಾರೆ. ಇರಾನ್ ತನ್ನ ಪರಮಾಣು ಹಾಗೂ ಕ್ಷಿಪಣಿ ಕಾರ್ಯಕ್ರಮಗಳನ್ನು ನಿಲ್ಲಿಸದಿದ್ದರೆ ಅಮೆರಿಕ ಮುಂದಿನ ಹೆಜ್ಜೆ ಇಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಆ ಮುಂದಿನ ಹೆಜ್ಜೆ ಸೈನಿಕ ದಾಳಿಯಾಗಿರಬಹುದು ಎನ್ನುವ ಆತಂಕ ವ್ಯಕ್ತವಾಗಿದೆ.

ಇದನ್ನೂ ಓದಿ:

ಅಮೆರಿಕ ತನ್ನ ನೌಕಾಪಡೆಯನ್ನು ಮಧ್ಯಪ್ರಾಚ್ಯ ಭಾಗದಲ್ಲಿ ಬಲಪಡಿಸಿದೆ. ಆಧುನಿಕ ಯುದ್ಧನೌಕೆ USS Gerald R. Ford ಮೆಡಿಟರೇನಿಯನ್ ಸಮುದ್ರಕ್ಕೆ ಸಾಗುತ್ತಿರುವುದಾಗಿ ವರದಿಯಾಗಿದೆ. ಜೊತೆಗೆ ಎಫ್-35, ಎಫ್-22 ಸೇರಿದಂತೆ ಹಲವು ಯುದ್ಧವಿಮಾನಗಳನ್ನು ನಿಯೋಜಿಸಲಾಗಿದೆ.

ಇದೇ ವೇಳೆ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿ ಅಮೆರಿಕ-ಇರಾನ್ ಪ್ರತಿನಿಧಿಗಳು ಪರಮಾಣು ಒಪ್ಪಂದದ ಕುರಿತು ಚರ್ಚೆ ನಡೆಸಿದ್ದಾರೆ. ಆದರೆ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿಯೇ ಇದೆ. ದಾಳಿ ನಡೆದರೆ ಪಶ್ಚಿಮ ಏಷ್ಯಾದಲ್ಲಿ ದೊಡ್ಡ ಮಟ್ಟದ ಸಂಘರ್ಷ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !