ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದು, ಕೋವಿಡ್ ಪ್ರಮಾಣ ಕೊಂಚ ಇಳಿಕೆಯಾಗಿದೆ. ಆದರೆ ಗ್ರಾಮೀಣ ಪ್ರದೇಶಲ್ಲಿ ಸೋಂಕು ಹೆಚ್ಚಳವಾಗುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಇರುವ ಪರಿಸ್ಥಿತಿಯನ್ನು ಗಮನಿಸಿದರೆ ಇನ್ನೂ ಹತ್ತು ದಿನ ಲಾಕ್ಡೌನ್ ಮುಂದುವರಿಸುವುದು ಒಳ್ಳೆಯದು ಎಂದು ಹೇಳಿದ್ದಾರೆ. ಈ ಬಗ್ಗೆ ಸಿಎಂ ಅವರಿಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಸಿಎಂ ತೀರ್ಮಾನವೇ ಅಂತಿಮ ಎಂದಿದ್ದಾರೆ.