ಉಡುಪಿಯಲ್ಲಿ ಭೀಕರ ಅಗ್ನಿ ಅವಘಡ: 10 ಬೋಟ್‌ಗಳು ಸುಟ್ಟು ಕರಕಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭೀಕರ ಅಗ್ನಿ ಅವಘಡದಿಂದಾಗಿ ಹತ್ತು ಮೀನುಗಾರಿಕಾ ಬೋಟುಗಳು ಸುಟ್ಟು ಕರಕಲಾಗಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಇಂದು ನಡೆದಿದೆ.

ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

ಲಂಗರು ಹಾಕಿದ್ದ ಬೋಟ್​​ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದರ ಪರಿಣಾಮ ಅಕ್ಕ ಪಕ್ಕದ ಮೀನುಗಾರಿಕಾ ಬೋಟುಗಳಿಗೆ ಬೆಂಕಿ ವ್ಯಾಪಿಸಿದ್ದು, 10 ಹಡಗುಗಳು ಬೆಂಕಿಗಾಹುತಿಯಾಗಿವೆ.

ದೀಪಾವಳಿ ಪ್ರಯುಕ್ತ ಬೋಟುಗಳಿಗೆ ಪೂಜೆ ಮಾಡಿ ನಿಲ್ಲಿಸಲಾಗಿತ್ತು. ಈ ವೇಳೆ ಕಾರ್ಮಿಕರು ಪಟಾಕಿ ಸಿಡಿಸಿದ್ದರಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಯಾವುದೇ ಸಾವು-ನೋವು ಉಂಟಾಗಿಲ್ಲ. ಅಗ್ನಿ ಶಾಮಕ ದಳ, ಸಾರ್ವಜನಿಕರು ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!