ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಹೆಚ್ಚಿಸಲು ಶೇ. 10ರಷ್ಟು ಗ್ರೇಸ್ ಮಾರ್ಕ್ಸ್ ನೀಡಲು ನಿರ್ಧರಿಸಲಾಗಿದೆ.
ಭಾಷಾ ವಿಷಯಗಳಿಗೆ ಶೇ.10ರಷ್ಟು ಹಾಗೂ ಐಚ್ಛಿಕ ವಿಷಯಗಳಿಗೆ ಶೇ.8ರಷ್ಟು ಕೃಪಾಂಕ ನೀಡಲು ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧಾರ ಮಾಡಿದೆ.
ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಈ ನೀತಿ ಪ್ರಾರಂಭವಾಗಿದ್ದು, ಈ ಬಾರಿಯೂ ಮುಂದುವರಿಯಲಿದೆ. ಗ್ರೇಸ್ ಮಾರ್ಕ್ಸ್ ನಿಂದ ಪಾಸಿಂಗ್ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.