ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಿಂದ ಸಾವಿರಾರು ಕಾರ್ಮಿಕರು ಕೆಲಸಕ್ಕಾಗಿ ಇಸ್ರೇಲ್ಗೆ ಹೋಗಿದ್ದು, ಇತ್ತೀಚೆಗೆ 10 ಮಂದಿ ಭಾರತೀಯರು ನಾಪತ್ತೆಯಾಗಿದ್ದಾರೆ ಎನ್ನುವ ವಿಷಯ ತಿಳಿದು ಬಂದಿದ್ದು. ಅವರೆಲ್ಲರನ್ನು ಪ್ಯಾಲೆಸ್ತೀನಿಯರು ಅಪಹರಿಸಿದ್ದು, ಇಸ್ರೇಲ್ ಅಧಿಕಾರಿಗಳು ರಕ್ಷಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅವರೆಲ್ಲರ ಪಾಸ್‌ಪೋರ್ಟ್‌ಗಳನ್ನು ಕಸಿದುಕೊಂಡ ನಂತರ ಒಂದು ತಿಂಗಳಿಗೂ ಹೆಚ್ಚು ಕಾಲ ಒತ್ತೆಯಾಳಾಗಿ ಇರಿಸಲಾಗಿದ್ದ ಹಳ್ಳಿಯಿಂದ ಅವರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.
ಜನಸಂಖ್ಯಾ ಮತ್ತು ವಲಸೆ ಪ್ರಾಧಿಕಾರವು ಇಸ್ರೇಲ್ ರಕ್ಷಣಾ ಪಡೆಗಳು ಮತ್ತು ನ್ಯಾಯ ಸಚಿವಾಲಯದ ಸಹಯೋಗದೊಂದಿಗೆ ರಾತ್ರಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಕಾರ್ಮಿಕರನ್ನು ರಕ್ಷಿಸಲಾಗಿದೆ. ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಈ ಘಟನೆಯ ಬಗ್ಗೆ ಮಾಹಿತಿ ನೀಡಿದೆ.