ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಹತ್ತು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ತೋಟಚಾರ್ಲಾ ಗ್ರಾಮದ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಹೈದರಾಬಾದ್‌ನಿಂದ ವಿಜಯನಗರಂಗೆ ಬಸ್ ತೆರಳುತ್ತಿತ್ತು. ಅತಿ ವೇಗವಾಗಿ ಚಲಿಸುತ್ತಿದ್ದ ಬಸ್ ತೋಟಚಾರ್ಲಾ ಗ್ರಾಮದ ಬಳಿ ಪಲ್ಟಿಯಾಗಿದೆ. ಬಸ್‌ನಲ್ಲಿದ್ದ 40 ಪ್ರಯಾಣಿಕರ ಪೈಕಿ 10 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಗಾಯಾಳುಗಳನ್ನು ನಂದಿಗಾಮ ಮತ್ತು ವಿಜಯವಾಡದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.