Sunday, December 3, 2023

Latest Posts

ಅಕ್ಟೋಬರ್ ತಿಂಗಳಿನಿಂದಲೇ 10 ಕೆಜಿ ಅಕ್ಕಿ ವಿತರಣೆ: ಸಚಿವ ಮುನಿಯಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ಟೋಬರ್ ತಿಂಗಳಿನಿಂದಲೇ ಅನ್ನಭಾಗ್ಯ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ವಿತರಣೆ ಮಾಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಅಕ್ಕಿ ಖರೀದಿ ಕೊನೆ ಹಂತದ ಮಾತುಕತೆಯಲ್ಲಿದೆ.ಶೀಘ್ರದಲ್ಲೇ ಫೈನಲ್ ಆಗಲಿದೆ. ಅಕ್ಟೋಬರ್ ತಿಂಗಳಿಂದಲೇ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದಾರೆ.

ಇದುವರೆಗೆ ಬರೀ 5 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿತ್ತು,ಇದೀಗ 5 ಕೆಜಿ ಅಕ್ಕಿ ಬದಲು ಹಣ ಹಾಕುವ ವ್ಯವಸ್ಥೆಗೆ ಬ್ರೇಕ್ ಹಾಕಿ ಅಕ್ಟೋಬರ್ ನಿಂದ 10 ಕೆಜಿ ಅಕ್ಕಿ ವಿತರಿಸಲಿದೆ.ರಾಜ್ಯದಲ್ಲಿ ಬರ ಇದ್ದರೂ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಕೃಷಿ ಚಟುವಟಿಕೆಗಳಿಗೆ ನೀರಾಗಲಿದೆ ಎಂದು ಸಚಿವರು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!