Wednesday, September 27, 2023

Latest Posts

ಭೀಕರ ರಸ್ತೆ ಅಪಘಾತ: 10 ಮಂದಿ ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎರಡು ಟ್ರಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 10 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾದ ಘಟನೆ ಗುಜರಾತ್‍ನ ಅಹಮದಾಬಾದ್‌ನಲ್ಲಿರುವ ಬಗೋದರ ಹೆದ್ದಾರಿಯಲ್ಲಿ ನಡೆದಿದೆ.

ಕಳೆದ ರಾತ್ರಿ 12 ಗಂಟೆ ಸುಮಾರಿಗೆ ಹೆದ್ದಾರಿಯಲ್ಲಿ ಮಿನಿ ಟ್ರಕ್‌ ಮತ್ತೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದ್ದು, ಐವರು ಮಹಿಳೆಯರು, ಮೂವರು ಮಕ್ಕಳು ಹಾಗೂ ಇಬ್ಬರು ಪುರುಷರು ಸೇರಿ 10 ಮಂದಿ ಮೃತಪಟ್ಟಿದ್ದಾರೆ.

ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಬಾಗೋದರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇತರ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!