ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗದಲ್ಲಿ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು 10 ಲಕ್ಷ ರೂ.ಗಳ ನೆರವನ್ನು ಘೋಷಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಡಾ.ಸಿ.ಎನ್ ಅಶ್ವತ್ಥನಾರಾಯಣ ಫೌಂಡೇಶನ್ ನಿಂದ ಪರಿಹಾರದ ಮೊತ್ತ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಹರ್ಷ ಅವರ ತಾಯಿ ಜತೆ ದೂರವಾಣಿ ಮೂಲಕ ಮಾತನಾಡಿದ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸಂತ್ವಾನ ಹೇಳಿದ್ದು, ‘ಹರ್ಷ ಈ ಸಮಾಜಕ್ಕಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿದ್ದಾನೆ. ಈ ಕಷ್ಟದ ಸಮಯದಲ್ಲಿ ಆತನ ಕುಟುಂಬದ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ. ಘೋಷಿಸಿರುವ ಹಣವನ್ನು ಹರ್ಷನ ತಾಯಿಯವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು ಎಂದಿದ್ದಾರೆ.