Wednesday, June 7, 2023

Latest Posts

ಹಿಂದೆಂದೂ ನಡೆಯದ ಭರ್ಜರಿ ರೋಡ್ ಶೋ, ಮೋದಿ ನೋಡಲು ಬರಲಿದ್ದಾರೆ 10 ಲಕ್ಷ ಮಂದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಪ್ರಧಾನಿ ಮೋದಿ ಎರಡು ದಿನಗಳ ರೋಡ್ ಶೋ ನಡೆಸಲಿದ್ದು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆ ಇದೆ. ಒಟ್ಟಾರೆ 26 ಕಿ.ಮೀ ರೋಡ್ ಶೋ ಇದಾಗಿದ್ದು, ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಯಲಿದೆ.

ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಒಟ್ಟಾರೆ ಐದು ಸಾವಿರಕ್ಕೂ ಹೆಚ್ಚು ಪೊಲೀಸರು, 2,500 ಕ್ಕೂ ಹೆಚ್ಚು ಟ್ರಾಫಿಕ್ ಪೊಲೀಸರನ್ನು ನಿಯೋಜಿಸಲಾಗಿದೆ.

ರಾಜ ಭವನ ರಸ್ತೆ, ರಮಣ ಮಹರ್ಷಿ ರಸ್ತೆ, ಮೇಖ್ರಿ ಸರ್ಕಲ್, ಆರ್ ಬಿ ಐ ಲೇಔಟ್, ಜೆಪಿ ನಗರ, ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್, ಆಮುರ್ಗಂ ಸರ್ಕಲ್, ಬುಲ್ ಟೆಂಪಲ್ ರೋಡ್, ರಾಮಕೃಷ್ಣಾಶ್ರಮ, ಉಮಾ ಟಾಕೀಸ್, ಟಿಆರ್ ಮಿಲ್, ಚಾಮಾರಾಜಪೇಟೆ ಮುಖ್ಯ ರಸ್ತೆ. ಬಾಳೆಕಾಯಿ ಮಂಡಿ, ಕೆ ಪಿ ಅಗ್ರಹಾರ.

ಮಾಗಡಿ ರೋಡ್, ಚೇಳೂರುಪಾಳ್ಯ ರೋಡ್, ಎಂಸಿ ಸರ್ಕಲ್, ವೆಸ್ಟ್ ಆಫ್ ಕಾರ್ಡ್ ರೋಡ್, ಎಂ ಸಿ ಲೇಔಟ್ , ನಾಗರ ಭಾವಿ ಮುಖ್ಯ ರಸ್ತೆ, ಬಿಜಿಎಸ್ ಮೈದಾನ, ಹಾವನೂರು ಸರ್ಕಲ್, ಎಂಟನೇ ಮುಖ್ಯರಸ್ತೆ ಬಸವೇಶ್ವರ ನಗರ, ಬಸವೇಶ್ವರ ನಗರ ಹದಿನೈದನೇ ಮುಖ್ಯ ರಸ್ತೆ, ಶಂಕರ್ ಮಠ, ಮೋದಿ ಅಸ್ಪತ್ರೆ ರೋಡ್,ನವರಂಗ್ ರಸ್ತೆ, ಎಂ ಕೆಕೆ ರಸ್ತೆ, ಮಲ್ಲೇಶ್ವರಂ ಸರ್ಕಲ್, ಸಂಪಿಗೆ ರಸ್ತೆ, ಸ್ಯಾಂಕಿ ರಸ್ತೆಗಳು ಬಂದ್ ಆಗಿರಲಿವೆ, ಈ ರಸ್ತೆಗಳನ್ನು ಬಿಟ್ಟು ಪರ್ಯಾಯ ಮಾರ್ಗದಲ್ಲಿ ಪ್ರಯಾಣಿಕರು ಸಂಚರಿಸುವಂತೆ ಮನವಿ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!