ಪ್ರವೀಣ್ ನೆಟ್ಟಾರು ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು: ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕ ವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯ ವಾಗಿದೆ.10 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅವರು ಗದ್ಗದಿತರಾದರು.
ಪ್ರವೀಣ್ ಅವರ ಹಂತಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಪಕ್ಷದ ಕಾರ್ಯಕರ್ತರ ಆಕ್ರೋಶ ನನಗೆ ಅರ್ಥವಾಗುತ್ತದೆ. ಅಪರಾಧಿಗಳ ಹೆಡೆಮುರಿ ಕಟ್ಟುವ ಶಕ್ತಿ ಬಿಜೆಪಿ ಸರಕಾರಕ್ಕಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!