ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರು ಜು.08 ರಂದು ಸಾಮೂಹಿಕ ರಜೆ ಹಾಕಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
“ಬಿಬಿಎಂಪಿಯಲ್ಲಿ ಸುಮಾರು 6000 ಕ್ಕೂ ಮೇಲ್ಪಟ್ಟು ವಿವಿಧ ವೃಂದದ ಅಧಿಕಾರಿ /ನೌಕರರ ಹುದ್ದೆಗಳು ಖಾಲಿಯಿವೆ. ಹೀಗಾಗಿ, ಹಾಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ ನೌಕರರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ.
ಈ ಮಧ್ಯೆ ಯಾವುದೇ ನೋಟಿಸ್ ನೀಡದೆ ನೌಕರರನ್ನು ಅಮಾನತ್ತು ಮಾಡಿರುವುದನ್ನು, ತೆರವುಗೊಳಿಸುವಂತೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೂ ಯಾವುದೇ ರೀತಿ ಕ್ರಮ ವಹಿಸಿಲ್ಲ” ಎಂದು ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.