ಉತ್ತರಾಖಂಡದ ಕೇದಾರನಾಥದಲ್ಲಿ ರಣಭೀಕರ ಮಳೆಗೆ 10 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಕೇದಾರನಾಥ ಮಾರ್ಗದ ಕಾಂಕ್ರೀಟ್ ಸೇತುವೆ ಮತ್ತು ಕಾಲು ಸೇತುವೆಗೆ ಹಾನಿಯಾಗಿದೆ ಎಂದು ಉತ್ತರಾಖಂಡ ರಾಜ್ಯ ವಿಪತ್ತು ಕಾರ್ಯದರ್ಶಿ ವಿನೋದ್ ಕುಮಾರ್ ಸುಮನ್ ತಿಳಿಸಿದ್ದಾರೆ.

ಚಾರ್‌ಧಾಮ್‌ನ ಎಲ್ಲಾ ಮಾರ್ಗಗಳು ತೆರೆದಿವೆ, ಕೇದಾರನಾಥದ ಪಾದಚಾರಿ ಮಾರ್ಗವನ್ನು ಮಾತ್ರ ತಡೆಹಿಡಿಯಲಾಗಿದೆ. ಇತರ 100 ಮಾರ್ಗಗಳು ಅಡಚಣೆಯಾಗಿದೆ ಅವುಗಳನ್ನು ತೆರೆಯಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಮುಖ್ಯ ಕಾರ್ಯದರ್ಶಿ ಹೇಳಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ದುರಂತ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದರು. ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಪರಿಸ್ಥಿತಿಯನ್ನು ನಿರ್ಣಯಿಸಲು ಮುಖ್ಯಮಂತ್ರಿಗಳು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!