ರಾಜ್ಯ ಬಜೆಟ್ | ರಾಜಧಾನಿ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಅನುದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಬಸವರಾಜ ಬೊಮ್ಮಾಯಿ ಜನಪ್ರಿಯ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿ ಬೆಂಗಳೂರು ಅಭಿವೃದ್ಧಿಗೆ ಭಾರೀ ಅನುದಾನ ದೊರಕಿದೆ.

ಬೆಂಗಳೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ 10 ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಹಣಕಾಸು ಪರಿಸ್ಥಿತಿ ಸದೃಢವಾಗಿದ್ದು, ಸ್ವಾವಲಂಬನೆಯ ಮೂಲಕ ರಾಜ್ಯದ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ವಿಶ್ವದಲ್ಲೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ಬೆಂಗಳೂರು ನಗರಿ ಬೆಳವಣಿಗೆಗೆ ಸಾಕಷ್ಟು ಸವಲತ್ತುಗಳ ಅವಶ್ಯವಿದೆ. ಸುಗಮ ಸಂಚಾರ, ರಾಜಕಾಲುವೆಗಳ ಅಭಿವೃದ್ಧಿ, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ, ಶಿಕ್ಷಣ ಸೌಲಭ್ಯ ನೀಡಲು ಸರ್ಕಾರ ಆದ್ಯತೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!