ಯಮರೂಪಿ ಟ್ರಕ್‌ಗೆ 10 ವರ್ಷದ ಬಾಲಕಿ ಬಲಿ, ಚಾಲಕ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಿಲ್ಪಾಟಾ ಪ್ರದೇಶದಲ್ಲಿ ವೇಗವಾಗಿ ಬಂದ ಟ್ರಕ್‌ಗೆ ಸಿಲುಕಿ 10 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ದಾರುಣ ಘಟನೆ ಬುಧವಾರ ರಾತ್ರಿ ನಡೆದಿದೆ.

ಪೊಲೀಸರ ಪ್ರಕಾರ, ರಾತ್ರಿ 8 ಗಂಟೆ ಸುಮಾರಿಗೆ ಬಾಲಕಿ ರಸ್ತೆ ದಾಟುವ ವೇಳೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಇದರಿಂದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತ ಬಾಲಕಿಯನ್ನು ರೋಲಿ ರಾಮ್ ಲವ್ಕುಶ್ ಮಿಶ್ರಾ (10) ಎಂದು ಗುರುತಿಸಲಾಗಿದೆ. ಆರೋಪಿ ಚಾಲಕನನ್ನು ಬಂಧಿಸಲಾಗಿದ್ದು, ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿಯನ್ನು ನೀಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!