ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗಿದರೆ 10 ವರ್ಷ ಜೈಲು, 1 ಕೋಟಿ ದಂಡ: ಕೇಂದ್ರ ಸರಕಾರದಿಂದ ಮಸೂದೆ ಮಂಡನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳಿಗೆ ಬ್ರೇಕ್ ಹಾಕಲು ದಿಟ್ಟ ಹೆಜ್ಜೆ ಇಟ್ಟಿದೆ. ನೇಮಕಾತಿ ಪರೀಕ್ಷೆಗಳಲ್ಲಿ (Central Exams) ಅಕ್ರಮ ಎಸಗಿದರೆ 3 ರಿಂದ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ವರೆಗೆ ದಂಡ ವಿಧಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದೆ.

ಕೇಂದ್ರೀಯ ನೇಮಕಾತಿ ಮತ್ತು ಪ್ರವೇಶ ಪರೀಕ್ಷೆ, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC), ಸ್ಟಾಫ್ ಸೆಲೆಕ್ಷನ್ ಕಮಿಷನ್, ರೈಲ್ವೆ ನೇಮಕಾತಿ ಮಂಡಳಿಗಳು, ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗಳಿಗೆ’ಕೇಂದ್ರ ನೇಮಕಾತಿ ಪರೀಕ್ಷೆಗಳ ಅಕ್ರಮ ತಡೆ ಮಸೂದೆ 2024′ (Public Examinations (Prevention of Unfair Means) Bill, 2024) ಅನ್ವಯವಾಗುತ್ತದೆ.

ಎಂಜಿನಿಯರಿಂಗ್‍ಗಾಗಿ ಜಂಟಿ ಪ್ರವೇಶ ಪರೀಕ್ಷೆ, ವೈದ್ಯಕೀಯ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ, ಮತ್ತು ಪದವಿಪೂರ್ವ ಮತ್ತು ಸ್ನಾತಕೋತ್ತರ ಅಧ್ಯಯನಗಳಿಗೆ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ, ಈ ಗೊತ್ತುಪಡಿಸಿದ ಸಾರ್ವಜನಿಕ ಪರೀಕ್ಷಾ ಪ್ರಾಧಿಕಾರಗಳ ಹೊರತಾಗಿ ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳು, ಹಾಗೆಯೇ ನೇಮಕಾತಿಗಾಗಿ ಅವರ ಕಚೇರಿಗಳು ನಡೆಸುವ ಪರೀಕ್ಷೆಗಳು ಹೊಸ ಕಾನೂನಿನ ವ್ಯಾಪ್ತಿಗೆ ಬರುತ್ತವೆ.

ಹಣ ಅಥವಾ ಇನ್ನಿತರ ಉದ್ದೇಶಕ್ಕೆ ಅನ್ಯಾಯದ ಮಾರ್ಗದಲ್ಲಿ ತೊಡಗಿರುವ ವ್ಯಕ್ತಿಗಳು, ಸಂಘಟಿತ ಗುಂಪುಗಳು ಅಥವಾ ಸಂಸ್ಥೆಗಳು, ಶಿಕ್ಷೆಯನ್ನು ಈ ಮಸೂದೆ ನೀಡಲಿದೆ. ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳನ್ನು ಅದರ ವ್ಯಾಪ್ತಿಯಿಂದ ಹೊರಗಿಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!