ಜ. 22ರಂದು ಆಯೋಧ್ಯೆಯ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 100 ಚಾರ್ಟೆಡ್ ಫ್ಲೈಟ್ ಲ್ಯಾಂಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಸಾವಿರಾರು ಗಣ್ಯರನ್ನು ಆಹ್ವಾನಿಸಲಾಗಿದೆ. ಸಾಧು ಸಂತರು, ಸ್ವಾಮೀಜಿಗಳು ಸೇರಿದಂತೆ ಲಕ್ಷಾಂತರ ಭಕ್ತರು ರಾಮ ಮಂದಿರ ಆಗಮಿಸುತ್ತಿದ್ದಾರೆ.

ಈಗಾಗಲೇ ಸುಸಜ್ಜಿತ ವಾಲ್ಮೀಕಿ ಮಹರ್ಷಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನೆಯಾಗಿದೆ. ಇದೀಗ ಈ ವಿಮಾನ ನಿಲ್ದಾಣದಲ್ಲಿ ಜನವರಿ 22ರಂದು 100 ಚಾರ್ಟೆಡ್ ಫ್ಲೈಟ್ ಲ್ಯಾಂಡ್ ಆಗಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಆಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಾಮರ್ಥ್ಯದ ಕುರಿತ ಸಂಪೂರ್ಣ ಚಿತ್ರಣ ಜನವರಿ 22ರಂದು ಲಭ್ಯವಾಗಲಿದೆ. ಭಕ್ತರು, ಪ್ರಯಾಣಿಕರನ್ನು ಹೊತ್ತ ವಿಮಾನಗಳು ಆಯೋಧ್ಯೆಯಲ್ಲಿ ಲ್ಯಾಂಡ್ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತ ಇತರ ಗಣ್ಯರ ವಿಮಾನಗಳು ಇದೇ ಆಯೋಧ್ಯೆ ವಿಮಾನ ನಿಲ್ದಾದಲ್ಲಿ ಲ್ಯಾಂಡ್ ಆಗಲಿದೆ. ಇದರ ಜೊತೆಗೆ 100 ಚಾರ್ಟೆಡ್ ಫ್ಲೈಟ್ ಆಯೋಧ್ಯೆಯಲ್ಲಿ ಲ್ಯಾಂಡ್ ಆಗಲಿದೆ ಎಂದು ಯೋಗಿ ಹೇಳಿದ್ದಾರೆ.

ಉತ್ತರ ಪ್ರದೇಶಕ್ಕೆ 4ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನೀಡಿದ ಪ್ರಧಾನಿ ಮೋದಿಗೆ ಧನ್ಯವಾದ. ಡಿಸೆಂಬರ್ 30 ರಂದು ಪ್ರಧಾನಿ ಮೋದಿ ಆಯೋಧ್ಯೆ ವಿಮಾನ ನಿಲ್ದಾಣ ಉದ್ಗಾಟನೆ ಮಾಡಿದ್ದಾರೆ. ಈ ವಿಮಾನ ನಿಲ್ದಾಣ ದೂರದ ರಾಮ ಭಕ್ತರನ್ನು ಆಯೋಧ್ಯೆ ಜೊತೆ ಸಂಪರ್ಕಿಸುವ ಕೆಲಸ ಮಾಡಲಿದೆ ಎಂದು ಯೋಗಿ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣಕ್ಕೆ ‘ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಯೋಧ್ಯಾಧಾಮ’ ಎಂದು ಹೆಸರಿಡುವ ಪ್ರಸ್ತಾವನಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಕೇಂದ್ರ ಸಚಿವ ಸಂಪುಟ ಇತ್ತೀಚೆಗೆ ಅನುಮೋದನೆ ನೀಡಿತ್ತು.ಸಂಪುಟ ಸಭೆಯಲ್ಲಿ ಅಯೋಧ್ಯೆ ವಿಮಾನ ನಿಲ್ದಾಣವನ್ನು ‘ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದೂ ಘೋಷಿಸಲು ನಿರ್ಧರಿಸಲಾಗಿದೆ.

‘ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಅಯೋಧ್ಯಾಧಾಮ’ ವಿಮಾನ ನಿಲ್ದಾಣದ ಹೆಸರು ಮಹಾಕಾವ್ಯ ರಾಮಾಯಣವನ್ನು ರಚಿಸಿದ, ಮಹರ್ಷಿ ವಾಲ್ಮೀಕಿಗೆ ಗೌರವ ಸಲ್ಲಿಸುತ್ತದೆ. ಅಯೋಧ್ಯೆಯ ಆರ್ಥಿಕ ಸಾಮರ್ಥ್ಯ ಮತ್ತು ಜಾಗತಿಕ ಯಾತ್ರಾ ಸ್ಥಳವಾಗಿ ಅದರ ಮಹತ್ವವನ್ನು ಉನ್ನತೀಕರಿಸಲು ಅಯೋಧ್ಯೆ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ಸ್ಥಾನಮಾನಕ್ಕೆ ಏರಿಸುವುದು ಉತ್ತಮವಾಗಿದೆ’ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!