Thursday, August 18, 2022

Latest Posts

ಭಾರತದಲ್ಲಿ 100 ಕೋಟಿ ಡೋಸ್ ವ್ಯಾಕ್ಸೀನ್ ಪೂರ್ಣ: ಏಳು ಲಸಿಕೆ ಉತ್ಪಾದಕರ ಜೊತೆ ಪ್ರಧಾನಿ ಮೋದಿ ಸಭೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತದಲ್ಲಿ 100 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ನೀಡುವ ಮೂಲಕ ಹೊಸ ದಾಖಲೆ ಬರೆದ ಬೆನ್ನಲ್ಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಳು ಭಾರತೀಯ ಕೊವಿಡ್-19 ಲಸಿಕೆ ತಯಾರಕರನ್ನು ಭೇಟಿಯಾಗಿದ್ದಾರೆ.
ಭಾರತೀಯ ಲಸಿಕೆ ಉತ್ಪಾದಕರೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ, ಅವರೆಲ್ಲರ ಸಹಕಾರದಿಂದ ದೇಶದಲ್ಲಿ 100 ಕೋಟಿ ಡೋಸ್ ಕೊವಿಡ್ ಲಸಿಕೆಯ ಮೈಲುಗಲ್ಲನ್ನು ಸಾಧಿಸಿದ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಭಾರತ ಮೂಲದ ಸೀರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ, ಭಾರತ್ ಬಯೋಟೆಕ್, ಡಾ. ರೆಡ್ಡಿ ಲ್ಯಾಬೋರೇಟರೀಸ್, ಜೈಡಸ್ ಕ್ಯಾಡಿಲಾ, ಬಯೋಲಾಜಿಕಲ್ ಇ, ಗೆನ್ನೋವಾ ಬಯೋಫಾರ್ಮಾ ಮತ್ತು ಪ್ಯಾನೇಸಿಯ ಬಯೋಟೆಕ್ ಉತ್ಪಾದನಾ ಕಂಪನಿಗಳ ಪ್ರತಿನಿಧಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!