ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಇಂದು 100 ಕೋಟಿ ರೂ. ಮೊತ್ತದ ಬೃಹತ್ ಸೈಬರ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಚೀನಾ ಪ್ರಜೆ ಫಾಂಗ್ ಚೆಂಜಿನ್‌ನನ್ನು ಸೈಬರ್ ಸೆಲ್ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಫಾಂಗ್ ಚೆಂಜಿನ್ ವಾಟ್ಸಾಪ್ ಗ್ರೂಪ್‌ಗಳ ಮೂಲಕ ಆನ್‌ಲೈನ್ ಸ್ಟಾಕ್ ಟ್ರೇಡಿಂಗ್ ಹಗರಣಗಳಲ್ಲಿ ಭಾಗಿಯಾಗಿದ್ದ. ಸಂತ್ರಸ್ತರಲ್ಲಿ ಒಬ್ಬರಾದ ಸುರೇಶ್ ಕೋಳಿಚಿಯಿಲ್ ಅಚ್ಯುತನ್ ಅವರು ಸೈಬರ್ ಕ್ರೈಂ ಪೋರ್ಟಲ್‌ನಲ್ಲಿ 43.5 ಲಕ್ಷ ರೂ. ವಂಚಿಸಿದ್ದಾನೆ ಎಂದು ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.
ವಂಚನೆಯ ಷೇರು ಮಾರುಕಟ್ಟೆಯ ತರಬೇತಿ ಅವಧಿಗಳಿಗೆ ಆಮಿಷವೊಡ್ಡಲಾಯಿತು. ನಂತರ ಹಣವನ್ನು ಹಲವಾರು ವಹಿವಾಟುಗಳಲ್ಲಿ ಹೂಡಿಕೆ ಮಾಡುವಂತೆ ಹೇಳಿ ವಂಚನೆ ಎಸಗಲಾಗಿದೆ. ನಂತರ ಈ ಹಣವನ್ನು ವಂಚಕರು ನಿಯಂತ್ರಿಸಲ್ಪಡುವ ಹಲವು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಯಿತು ಎಂದು ಹೇಳಿದ್ದಾರೆ.
ಏಪ್ರಿಲ್‌ನಲ್ಲಿ 1.25 ಲಕ್ಷ ರೂ. ವಂಚನೆ ಮಾಡಲಾಗಿದೆ. ರಾಷ್ಟ್ರ ರಾಜಧಾನಿಯ ಮುಂಡ್ಕಾದಲ್ಲಿರುವ ಮಹಾಲಕ್ಷ್ಮಿ ಟ್ರೇಡರ್ಸ್ ಹೆಸರಿನಲ್ಲಿ ಬ್ಯಾಂಕ್ ಖಾತೆ ಇತ್ತು. ಅಪರಾಧಕ್ಕೆ ಸಂಬಂಧಿಸಿದ ಮೊಬೈಲ್ ಫೋನ್ ಕೂಡ ಪತ್ತೆಯಾಗಿದೆ. ಇದು ಆರೋಪಿ ಚೆಂಜಿನ್‌ನನ್ನು ಗುರುತಿಸಲು ಸಹಾಯವಾಯಿತು. ಆರೋಪಿಗಳು ದೆಹಲಿಯ ಸಫ್ದರ್‌ಜಂಗ್ ಎನ್‌ಕ್ಲೇವ್‌ನಲ್ಲಿ ವಾಸವಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಪರಾಧಗಳನ್ನು ನಡೆಸಲು ಬಳಸಲಾದ ಫೋನ್‌ನಲ್ಲಿ ಚೆಂಜಿನ್ ಮತ್ತು ಅವನ ಸಹಚರರ ನಡುವೆ ವಾಟ್ಸಾಪ್ ಸಂಭಾಷಣೆಗಳು ಸೇರಿದಂತೆ ಹಲವಾರು ಸಾಕ್ಷಿಗಳು ಸಿಕ್ಕಿದೆ. ಈ ಸಾಕ್ಷಿ ಮೇರೆಗೆ ಆತನನ್ನು ಬಂಧಿಸಲಾಗಿದೆ. ಸೈಬರ್ ಕ್ರೈಮ್ ಪೋರ್ಟಲ್‌ನಲ್ಲಿ ಕನಿಷ್ಠ 17 ದೂರುಗಳನ್ನು ದಾಖಲಿಸಲಾಗಿದೆ. ಎಲ್ಲವೂ ಒಂದೇ ಬ್ಯಾಂಕ್ ಖಾತೆಗೆ ಲಿಂಕ್ ಮಾಡಲಾಗಿದೆ. ದೂರುಗಳ ಪ್ರಕಾರ, 100 ಕೋಟಿ ರೂ. ವಂಚನೆಯಾಗಿದೆ ಎಂದು ಹೇಳಲಾಗಿದೆ. ಹೆಚ್ಚಿನ ತನಿಖೆಯಿಂದ ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಸೈಬರ್ ಕ್ರೈಮ್ ಮತ್ತು ಮನಿ ಲಾಂಡರಿಂಗ್ ಒಳಗೊಂಡತೆ ಇತರ ಎರಡು ಮಹತ್ವದ ವಂಚನೆ ಪ್ರಕರಣಗಳಿಗೂ ಫಾಂಗ್ ಚೆಂಜಿನ್‌ಗೂ ಸಂಬಂಧವಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ಶಹದಾರ, ಪ್ರಶಾಂತ್ ಗೌತಮ್ ತಿಳಿಸಿದ್ದಾರೆ.