ಆಪರೇಷನ್ ಕಮಲಕ್ಕೆ 100 ಕೋಟಿ ಆಫರ್ ಹೊಸದೇನಲ್ಲ: ಸಚಿವ ಚಲುವರಾಯಸ್ವಾಮಿ

ಹೊಸದಿಗಂತ ವರದಿ, ಮಂಡ್ಯ:

ಆಪರೇಷನ್ ಕಮಲ ಮಾಡಿ ಕಾಂಗ್ರೆಸ್ ಸರ್ಕಾರ ಬೀಳಿಸಲು ನಮ್ಮ ಶಾಸಕರಿಗೆ 100 ಕೋಟಿ ಆಫರ್ ನೀಡಿರುವುದು ಇದೇನು ಹೊಸದೇನಲ್ಲ, ಈ ಹಿಂದೆಯೂ ಸರ್ಕಾರ ಬೀಳಿಸಲು 50 ಕೋಟಿ ಆಫರ್ ನೀಡಿದ್ದರು ಆದರೆ, ಈಗ ಇದು ಡಬ್ಬಲ್ ಆಗಿದೆ ಅಷ್ಟೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕುಮಾರಸ್ವಾಮಿ ಮುಖ್ಯ ಮಂತ್ರಿ ಆಗಿದ್ದಾಗ ಇದೇ ಬಿ.ಎಸ್.ಯಡಿಯೂರಪ್ಪ ಅವರನ್ನ ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರನ್ನು ಆಪರೇಷನ್ ಮಾಡಿದ್ದರು. ಈ ಸಂದರ್ಭದಲ್ಲಿ ಎಷ್ಟು ಹಣ ನೀಡಿದರು ಎಂಬುವ ಮಾಹಿತಿ ನನಗಿಲ್ಲ ಎಂದು ವ್ಯಂಗ್ಯವಾಡಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!