ಗಡಿಭಾಗದ ಶಾಲೆಗಳ ಅಭಿವೃದ್ದಿಗೆ 100 ಕೋಟಿ ರೂಪಾಯಿ: ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ, ಬೆಳಗಾವಿ:

(ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ವೇದಿಕೆ) ಅಖಂಡ ಕರ್ನಾಟಕದ ಗಡಿಭಾಗದಲ್ಲಿರುವ ರಾಜ್ಯದ 1800 ಗ್ರಾಮ ಪಂಚಾಯತಿ ಅಭಿವೃದ್ಧಿಪಡಿಸುವ ಯೋಜನೆಯನ್ನು ಮುಂದಿನ ದಿನಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶುಕ್ರವಾರ ರಾಮದುರ್ಗ ತಾಲೂಕಿನ ಸಾಲಹಳ್ಳಿ ರಾಮದುರ್ಗ ತಾಲೂಕಿನ ಅಂದಾಜು ರೂ. 671.28 ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಕರ್ನಾಟಕ ಗಡಿ ಸೇರಿದಂತೆ ಗಡಿಯಾಚೆ ಇರುವವರು ನಮ್ಮವರು, ಅಲ್ಲಿನ ಕನ್ನಡ ಶಾಲೆಗಳನ್ನು ಅಲ್ಲಿನ ರಾಜ್ಯ ಸರ್ಕಾರಗಳು ಕಡೆಗಣಿಸಿರುವುದರಿಂದ. ಮೂಲಸೌಕರ್ಯ ಕಲ್ಪಿಸುವುದು ಸಾಧ್ಯವಾಗಿರುವುದಿಲ್ಲ.
ಗಡಿಭಾಗದ ಶಾಲೆಗಳ ಅಭಿವೃದ್ದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಇದೇ ವರ್ಷ 100 ಕೋಟಿ ರೂಪಾಯಿ ಖರ್ಚು ಮಾಡಲಾಗುವುದು ಎಂದು ತಿಳಿಸಿದರು.
ಕನ್ನಡಿಗರ ಅಭಿವೃದ್ಧಿ ಹಾಗೂ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ದೇಶದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿಗೆ ಬದ್ಧವಾಗಿದ್ದು, ಈ ರಾಜ್ಯದ ನಾಡು-ನುಡಿ ಅಭಿವೃದ್ಧಿಪಡಿಸುವುದು ಸರ್ಕಾರದ ಸಂಕಲ್ಪವಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!