ಗಡಿನಾಡಿನ ಅಭಿವೃದ್ಧಿಗೆ 100 ಕೋಟಿ ರೂ.: ಸಿಎಂ ಬೊಮ್ಮಾಯಿ

ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ, ಹಾವೇರಿ

ಗಡಿನಾಡಿನ ಶಿಕ್ಷಣ,ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ 100 ಕೋಟಿ ರೂ.ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದ ಅವರು, ಕನ್ನಡದ ಶಾಸ್ತ್ರೀಯ ಭಾಷೆ ಸ್ಥಾನಮಾನದ ಸಂಶೋಧನಾ ಕಾರ್ಯಗಳಿಗೆ ಸಾಹಿತಿಗಳ ಸಮಿತಿ ರಚಿಸಲಾಗುವುದು.ಸಮಿತಿ ಸೂಚಿಸುವ ಸಂಶೋಧನಾ ಕಾರ್ಯಗಳಿಗೆ ಬೇಕಾದ ಹಣವನ್ನು ಸರ್ಕಾರ ಒದಗಿಸಲಿದೆ. ಸಮ್ಮೇಳನದ ನೆನಪಿಗೆ ಹಾವೇರಿಯಲ್ಲಿ 3 ಕೋಟಿ ರೂ.ವೆಚ್ಚದಲ್ಲಿ ಕಸಾಪ ಭವನ ನಿರ್ಮಿಸಿ,ಕರ್ನಾಟಕ ಜಾನಪದ ವಿವಿ ಸಹಯೋಗದಲ್ಲಿ ಗುಣಮಟ್ಟದ ಸಂಶೋಧನಾ ಕೇಂದ್ರವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.

ಕನ್ನಡಕ್ಕಾಗಿ ಹೋರಾಡಿದ ಹೋರಾಟಗಾರರ ಮೇಲಿರುವ ಕಾಗ್ನಿಜಬಲ್ ಹೊರತುಪಡಿಸಿದ ಉಳಿದ ಎಲ್ಲಾ ಪ್ರಕರಣಗಳನ್ನು ಹಿಂದೆ ಪಡೆಯಲು ಸರ್ಕಾರ ಬದ್ಧವಾಗಿದೆ ಏನ್ ದರು.

2008 ರಿಂದ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಪಡೆದಿದೆ‌‌.ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ 13.30 ಕೋಟಿ ರೂ.ನೆರವು ದೊರೆತಿದೆ.ಮೈಸೂರು ವಿವಿಯ ದೊಡ್ಡ ಕಟ್ಟಡವೊಂದನ್ನು ಈಗಾಗಲೇ ಅಧ್ಯಯನ ಕೇಂದ್ರಕ್ಕೆ ನೀಡಲಾಗಿದೆ.ಶಾಸ್ತ್ರೀಯ ಭಾಷೆ ಕುರಿತ ಸಂಶೋಧನೆ,ಗ್ರಂಥಾಲಯ,ಚರ್ಚೆಗಳಿಗೆ ಮಾರ್ಗದರ್ಶನ ಮಾಡಲು ಸಮ್ಮೇಳನಾಧ್ಯಕ್ಷರ ಮಾರ್ಗದರ್ಶನದಲ್ಲಿ ನಾಡಿನ ಹಿರಿಯ ಸಾಹಿತಿಗಳ ಸಮಿತಿ ರಚಿಸಲಾಗುವುದು.ಎಷ್ಟು ಅನುದಾನ ಬೇಕಾದರೂ ಸರ್ಕಾರ ಒದಗಿಸಲಿದೆ ಎಂದರು.

ತಾಯಿ ಕನ್ನಡ ಭುವನೇಶ್ವರಿಯ ಒಡಲು ಶ್ರೀಮಂತವಾದುದು.ಇಲ್ಲಿನ ಜ್ಞಾನ,ಸಾಹಿತ್ಯ,ತಂತ್ರಜ್ಞಾನ ಎಲ್ಲವೂ ಸಿರಿವಂತವಾಗಿದೆ. ಕನ್ನಡ ಭಾಷೆಯಲ್ಲಿ ಸ್ಪಷ್ಟತೆ,ನಿಖರತೆ,ಪ್ರಖರತೆಗಳಿವೆ.ಕನ್ನಡದ ಮನಸ್ಸುಗಳು ಸ್ವಚ್ಛ ಹಾಗೂ ಪಾರದರ್ಶಕವಾಗಿವೆ.ಬಹುತೇಕ ಸಾಹಿತ್ಯ ಹೃದಯದಿಂದ ಬಂದಿರುವ ಕಾರಣಕ್ಕಾಗಿ ಕನ್ನಡ ಸಾಹಿತ್ಯ ಸತ್ಯದ ದರ್ಶನವಾಗಿದೆ ಎಂದರು.

ಕಾನೂನು ತೊಡಕು ನಿವಾರಿಸಿಕೊಂಡು ಮಹಾದಾಯಿ ಯೋಜನೆ,ಕಳಸಾ ಬಂಡೂರಿ ಯೋಜನೆಯಾಗಿ ಅನುಷ್ಠಾನವಾಗಲಿದೆ.ಆಲಮಟ್ಟಿ ಜಲಾಶಯದ ಎತ್ತರವನ್ನು 524 ಮೀಟರಿಗೆ ಹೆಚ್ಚಿಸಲು ಶೀಘ್ರ ನ್ಯಾಯಮಂಡಳಿಯ ಅನುಮೋದನೆ ಸಿಗುವ ಭರವಸೆ ಇದೆ ಎಂದರು.

ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ ಮಾತನಾಡಿ,ನೆಲ,ಜಲ,ಸಂಸ್ಕೃತಿಯ ಅಭಿಮಾನದೊಂದಿಗೆ ನಾವು ಮುನ್ನಡೆಯಬೇಕು.ಸ್ಥಳೀಯ ಭಾಷೆಗಳ ಮಾಧ್ಯಮಗಳಲ್ಲಿ ಇಂಜಿನಿಯರಿಂಗ್,ವೈದ್ಯಕೀಯ ಶಿಕ್ಷಣ ದೊರೆಯಬೇಕು ಎಂಬ ಚರ್ಚೆಗಳು ನಡೆದಾಗ, ಕೆಲವರು ಸಂಶೋಧನೆ ಮತ್ತು ಅಭಿವೃದ್ಧಿ (ಆರ್‌ ಆ್ಯಂಡ್ ಡಿ)ಗೆ ವ್ಯತ್ಯಯವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದಾಗ,ಕೇಂದ್ರ ಗೃಹ ಸಚಿವರು ಆಂಗ್ಲಭಾಷೆಯ ಬಳಕೆಯೇ ಇಲ್ಲದ ದೇಶಗಳು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿಯನ್ನು ವಿವರಿಸಿದ್ದನ್ನು ಉದಾಹರಿಸಿ,ಹೊಸ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಗೆ ಆದ್ಯತೆ ನೀಡಿರುವುದಾಗಿ ತಿಳಿಸಿದರು.

ವಿಧಾನಪರಿಷತ್ ವಿರೋಧಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ ಮಾತನಾಡಿ,ಕನ್ನಡ-ಕನ್ನಡಿಗ-ಕರ್ನಾಟಕದ ಸಮಗ್ರತೆಯ ಕೇಂದ್ರ ಸ್ಥಾನವೇ ಮನುಷ್ಯತ್ವ, ಮಾನವೀಯತೆಯಾಗಿದೆ ಎಂದರು .
ರಾಜಕೀಯದಲ್ಲಿ ಜಾತಿ,ಧರ್ಮ,ಭ್ರಷ್ಟಾಚಾರ ಬೆರೆತು ಹೋಗಿದೆ.ಸಾಹಿತಿಗಳು ರಾಜಕಾರಣಿಗಳಿಗೆ ಬುದ್ಧಿ ಹೇಳಿ,ತಿದ್ದುವ ಕಾರ್ಯ ಮಾಡಬೇಕು.ಆದರೆ ವಿಧಾನಸೌಧವನ್ನು ಮೀರಿಸುವ ರೀತಿಯಲ್ಲಿ ಸಾಹಿತ್ಯ ಸಂಘಟನೆಗಳ ಚುನಾವಣೆಗಳು ನಡೆಯುತ್ತಿವೆ ಎಂಬುದನ್ನು ಅಲ್ಲಗಳೆಯಲಾಗದು.ಒಂದು ರಾಜಕೀಯ ಪಕ್ಷ ನೇರವಾಗಿ ಒಂದು ಜಾತಿ,ಧರ್ಮದ ಮತಗಳು ನನಗೆ ಬೇಡ ಎಂದು ಹೇಳಬಹುದು,ಆದರೆ ರಾಜಕಾರಣಿಗಳಂತೆ ಸಾಹಿತಿಗಳು ವರ್ತಿಸಬಾರದು.ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಧರ್ಮಗಳ ಸಾಹಿತಿಗಳನ್ನು ದೂರ ಇಟ್ಟಿರುವುದನ್ನು ಪ್ರತಿಭಟಿಸಿ,ಇಂದು ಬೆಂಗಳೂರಿನಲ್ಲಿ ಜನಸಾಹಿತ್ಯ ಸಮ್ಮೇಳನ ನಡೆಯುತ್ತಿದೆ.ಕಸಾಪ ಇಂತಹ ತಮ್ಮ ನಡೆಯನ್ನು ಸಮರ್ಥಿಸಿಕೊಳ್ಳಬಾರದು.ನೆಲ-ಜಲದ ಸಮಸ್ಯೆಗಳ ಪರಿಹಾರಕ್ಕೆ ಸಮ್ಮೇಳನ ಪರಿಹಾರಗಳನ್ನು ಸೂಚಿಸಬೇಕು ಎಂದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ , ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರೆಬೈಲು ಶಿವರಾಮ ಹೆಬ್ಬಾರ್ ಆಶಯ ನುಡಿಗಳನ್ನಾಡಿದರು.
ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಸಮಾರೋಪ ಭಾಷಣ ಮಾಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!