ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ರೂಪಾಯಿ ಆಫರ್ ಮಾಡಿತ್ತು ಎಂಬ ಸಿಎಂ ಸಿದ್ದರಾಮಯ್ಯ ಆರೋಪದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿಯಿಂದ 50 ಕೋಟಿ ಅಲ್ಲ, 100 ಕೋಟಿ ರೂಪಾಯಿ ಆಫರ್ ಬಂದಿದೆ. ಶೀಘ್ರದಲ್ಲೇ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ. ಹಣದ ಆಫರ್ ಕೊಟ್ಟಿದ್ದು ಯಾರು ಎಂಬುದು ಮಾತನಾಡಿದವರಿಗೂ ಗೊತ್ತು, ಮಾತನಾಡಿಸಿದವರಿಗೂ ಗೊತ್ತು. ನಮ್ಮತ್ರ ದಾಖಲೆಗಳಿವೆ. ಸೂಕ್ತ ಸಮಯದಲ್ಲಿ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.
ಬಿಜೆಪಿಯವರಿಗೆ ಹಿಂದಿನ ಸರ್ಕಾರದಲ್ಲಿ ಮಾಡಿದ್ದ ಹಗರಣಗಳ ಕಂಟಕ ಸುತ್ತಿಕೊಂಡಿದೆ. ಅದರಿಂದ ಬಚಾವಾಗಲು, ಆ ಅಕ್ರಮದ ದುಡ್ಡನ್ನೇ ಮುಂದಿಟ್ಟುಕೊಂಡು ಸರ್ಕಾರ ಬೀಳಿಸಲು ಯತ್ನಿಸುತ್ತಿದ್ದಾರೆ. ಅದರ ಜತೆಗೆ ಕೇಂದ್ರ ಸರ್ಕಾರದ ಬೆಂಬಲ ಇದೆ. ಇದೀಗ ಜೆಡಿಎಸ್ ಕೂಡ ಜತೆಗೂಡಿದೆ ಎಂದಿದ್ದಾರೆ.