100 ದಿನ ಚುರುಕಾಗಿ ಕೆಲಸ ಮಾಡಿ, ಪಕ್ಷ ಅಧಿಕಾರಕ್ಕೆ ತನ್ನಿ: ಬಿ.ಎಲ್.ಸಂತೋಷ

ಹೊಸ ದಿಗಂತ ವರದಿ, ಕಲಬುರಗಿ:

ರಾಜ್ಯ ವಿಧಾನ ಸಭೆ ಚುನಾವಣಾ ಪ್ರಕ್ರಿಯೇಗೆ ಇನ್ನೇನೂ ಮೂರು ತಿಂಗಳು ಮಾತ್ರ ಬಾಕಿ ಉಳಿದಿದ್ದು, ನಾಯಕರಾಗಲಿ, ಕಾಯ೯ಕತ೯ರಾಗಲಿ ಬೆಂಗಳೂರು ಹೋಗುವುದನ್ನು ಬಿಟ್ಟು, ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಚುರುಕಾಗಿ ಕಾಯ೯ ನಿವ೯ಹಿಸುವಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು.

ಅವರು ಶುಕ್ರವಾರ ನಗರದ ಗೋಲ್ಡ್ ಹಬ್, ನ ಸಭಾಂಗಣದಲ್ಲಿ ಭಾರತೀಯ ಜನತಾ ಪಕ್ಷ ಕಲಬುರಗಿ ಜಿಲ್ಲೆಯ 9 ಮಂಡಲಗಳ ಶಕ್ತಿ ಕೇಂದ್ರ, ಮಹಾ ಶಕ್ತಿ ಕೇಂದ್ರ ಹಾಗೂ ಮಂಡಲಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಈ ಬಾರಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಲ್ಲಿ ಕೆಸರಿ ಪತಾಕೆ ಹಾರಬೇಕು. ಹೀಗಾಗಿ ನಾವೆಲ್ಲರೂ ಬೂತ್,ಗಳ ಕಡೆಗೆ ಹೆಚ್ಚು ಕೇಂದ್ರಿಕೃತವಾಗಿ ಕಾಯ೯ನಿವ೯ಹಿಸಬೇಕಿದೆ.ಬೂತ್ ಗೆದ್ದಲ್ಲಿ ಮಾತ್ರ, ನಾವು ಎಲ್ಲವನ್ನೂ ವಿಜಯಶಾಲಿಯಾಗಲಿದ್ದೇವೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದ ಖಾತೆಯಲ್ಲಿ 104 ಸ್ಥಾನಗಳು ಮಾತ್ರ ಬಂದಿವೆ.ಆದರೆ ಈ ಬಾರಿ ನಮ್ಮ ಗುರಿಯನ್ನು ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರ ಮೂಲಕ ತಲುಪಬೇಕಾಡಿದೆ ಎಂದು ಕಿವಿ ಮಾತು ಹೇಳಿದರು.

ಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ಕಳೆದ ಬಾರಿ ಅತ್ಯುತ್ತಮ ಮತಗಳನ್ನು ಪಡೆದು,ಅಲ್ಪ ಮತಗಳಲ್ಲೇಪರಾಜಯವಾಗಿದ್ದೇವೆ.ಈ ಬಾರಿ ಉತ್ತರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಶತಸಿದ್ದ ಆಗಲೇಬೇಕು, ಆ ರೀತಿ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸಬೇಕು ಎಂದು ಹೇಳಿದರು.

ಸಚಿವ ಮುರುಗೇಶ್ ನಿರಾಣಿ ಮಾತನಾಡಿದರು. ಇದೇ ಸಂದರ್ಭದಲ್ಲಿ ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಶ್ರೀಮತಿ ಹಿರಾಬೇನ್ ಮೋದಿ ನಿಧನದ ಹಿನ್ನೆಲೆಯಲ್ಲಿ ವೇದಿಕೆಯಲ್ಲಿ ಶೃದ್ಧಾಂಜಲಿ ಸಲ್ಲಿಸಲಾಯಿತು.

ಕೇಂದ್ರ ಸಚಿವ ಭಗವಂತ ಖೂಬಾ,ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ್, ಗ್ರಾಮಾಂತರ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ಕಲಬುರಗಿ ಸಂಸದ ಡಾ.ಉಮೇಶ್ ಜಾಧವ, ಬಾಬುರಾವ್ ಚಿಂಚನಸೂರ, ರಾಜ್ಯ ವಕ್ತಾರ, ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ, ಬಿ.ಜಿ.ಪಾಟೀಲ್, ಸುನೀಲ್ ವಲ್ಯಾಪುರ,ದತ್ತಾತ್ರೇಯ ಪಾಟೀಲ್ ರೇವೂರ, ಸುಭಾಷ್ ಗುತ್ತೇದಾರ, ಶಶೀಲ ನಮೋಶಿ,ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ್, ಈಶ್ವರ ಸಿಂಗ್ ಠಾಕೂರ್, ಮಾಜಿ ವಿಧಾನ ಪರಿಷತ್ ಸದಸ್ಯ ಅಮರನಾಥ್ ಪಾಟೀಲ್,
ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್, ಮಹಾದೇವ ಬೆಳಮಗಿ ಸೇರಿದಂತೆ ಪಾಲಿಕೆ ಸದಸ್ಯರು,ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!