ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಟಿಯಾಲದ ಸರ್ಕಾರಿ ವೈದ್ಯಕೀಯ ಕಾಲೇಜಿನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವ ಕಾರಣ ಹಾಸ್ಟೆಲ್‌ಗಳನ್ನು ಮುಚ್ಚಲಾಗಿದ್ದು, ಉಳಿದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ನೂರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿರುವ ಕಾರಣ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವ ಸಾಧ್ಯತೆ ಹೆಚ್ಚಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಲಾಗುತ್ತಿದೆ.
ಈ ನೂರು ಮಂದಿ ಪೈಕಿ ಹಲವರು ಪಾಟ್ನಾದಲ್ಲಿ ನಡೆದ ವೈದ್ಯಕೀಯ ಸಂಘದ ವಾರ್ಷಿಕ ಸಮ್ಮೇಳನದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಈ ಸಂಬಂಧ ಸಿಎಂ ಚರಂಜಿತ್ ಸಿಂಗ್ ಚನ್ನಿ ತುರ್ತು ಸಭೆ ನಡೆಸಿದ್ದು, ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ.