ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

100 ನಾಟ್ ಔಟ್, ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ: ಕಾಂಗ್ರೆಸ್ ನಾಯಕರ ಬಂಧನ, ಬಿಡುಗಡೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ವೇಳೆ ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರನ್ನು ಬಂಧಿಸಿ, ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಶಿವಾನಂದ ವೃತ್ತದ ಬಳಿ ಇರುವ ಪೆಟ್ರೋಲ್ ಬಂಕ್ ಮುಂಭಾಗ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು, ಇಂದಿನಿಂದ 5 ದಿನಗಳ ಕಾಲ ರಾಜ್ಯ ಕಾಂಗ್ರೆಸ್ ನಾಯಕರು 100 ನಾಟ್ ಔಟ್ ಘೋಷಣೆ ಅಡಿಯಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.
ಬೆಳಗ್ಗೆ 10 ಗಂಟೆವರೆಗೆ ಸೆಕ್ಷನ್ 144 ಜಾರಿಯಲ್ಲಿದ್ದು, 10 ಗಂಟೆಯಾದರೂ ಪ್ರತಿಭಟನೆ ಮುಂದುವರೆಸಿ ನಿಷೇಧಾಜ್ಞೆ ನಿಯಮ ಉಲ್ಲಂಘಿಸಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಆರ್. ವಿ. ದೇಶಪಾಂಡೆ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ.ಕ್ಷಗಳು ಟೀಕೆಯನ್ನು ನಿಲ್ಲಿಸಬೇಕು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss