ʼಆಪರೇಷನ್‌ ಸಿಂದೂರʼ ಪ್ರತಿಕಾರದ ದಾಳಿಗೆ ಪಾಕ್ ನ 100 ಉಗ್ರರು ಹತರಾಗಿದ್ದಾರೆ: ರಾಜನಾಥ್​ ಸಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಪಾಕಿಸ್ತಾನದದ​ ಮೇಲೆ ನಡೆಸಿರುವ ದಾಳಿಯಲ್ಲಿ 100 ಉಗ್ರರು ಹತರಾಗಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಹೇಳಿದ್ದಾರೆ. ಇಂದು ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ‘ಆಪರೇಷನ್​ ಸಿಂದೂರ’​ಗೆ 100 ಉಗ್ರರು ಬಲಿಯಾಗಿದ್ದಾರೆಂದು ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಸ್‌ಪಿಯ ರಾಮ್‌ಗೋಪಾಲ್ ಯಾದವ್ ಸೇರಿದಂತೆ ಎಲ್ಲ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

ಮೂಲಗಳ ಪ್ರಕಾರ, ಮೊದಲ ಬಾರಿಗೆ ಸರ್ಕಾರವು ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ ಭಯೋತ್ಪಾದಕರ ಸಂಖ್ಯೆಯನ್ನು ತಿಳಿಸಿದೆ. ಪಾಕಿಸ್ತಾನ ಏನಾದರೂ ಮಾಡಿದರೆ ನಾವು ಕೂಡ ಹಿಂದೆ ಸರಿಯುವುದಿಲ್ಲ ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!