ಹೊಸದಿಗಂತ ವರದಿ ಚಿತ್ರದುರ್ಗ
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗಣತಿ ನಮೂನೆಗಳ ಗಣಕೀಕರಣ ಪ್ರಕ್ರಿಯೆಯಲ್ಲಿ ಶೇ. 100 ರಷ್ಟು ಸಾಧನೆ ಮಾಡಿದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಲ್ಕುಂಟೆ ಮತಗಟ್ಟೆಯ ಬಿಎಲ್‌ಒ ಕೆ.ಹೆಚ್. ಇಮಾಮ್ ಹುಸೇನ್ ಸಾಹೇಬ್‌ರನ್ನು ಚಿತ್ರದುರ್ಗ ನಗರಸಭೆ ಸಭಾಂಗಣದಲ್ಲಿ ಇಂದು ಮಂಗಳವಾರ ಸನ್ಮಾನಿಸಲಾಯಿತು.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 01ರ ಕಲ್ಕುಂಟೆ ಬಿಎಲ್‌ಓ ಆಗಿ ಕಾರ್ಯನಿರ್ವಹಿಸುತ್ತಿರುವ ಕೆ.ಹೆಚ್.ಇಮಾಮ್ ಹುಸೇನ್ ಸಾಹೇಬ್ ಗಣತಿ ನಮೂನೆಗಳ ಗಣಕೀಕರಣ ಕಾರ್ಯದಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ್ದಾರೆ. ಅವರ ಈ ಅಪೂರ್ವ ಕರ್ತವ್ಯ ನಿಷ್ಠೆಯನ್ನು ಗುರುತಿಸಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಅವರು ಬಿಎಲ್‌ಓ ಇಮಾಮ್ ಹುಸೇನ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಅತ್ಯಂತ ಜವಾಬ್ದಾರಿಯುತವಾದ ಕೆಲಸವಾಗಿದೆ. ಇಮಾಮ್ ಹುಸೇನ್ ಅವರು ನಿಗದಿತ ಅವಧಿಯೊಳಗೆ ಶೇ.100ರಷ್ಟು ಗಣಕೀಕರಣ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಮಾದರಿಯಾಗಿದ್ದಾರೆ ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ:
ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ನಗರಸಭೆ ಪೌರಾಯುಕ್ತೆ ಲಕ್ಷ್ಮೀ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಿರೀಶ್, ಬಿಆರ‍್ಸಿ ಸಂಪತ್ ಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು.



