ಬಸ್ ಖರೀದಿ, ನಿರ್ವಹಣೆಯಲ್ಲಿ ವಂಚನೆ: ಕೇಜ್ರಿವಾಲ್ ಸರ್ಕಾರ ವಿರುದ್ಧ ಎಫ್‌ಐಆರ್ ದಾಖಲಿಸಿದ ಸಿಬಿಐ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದೆಹಲಿ ಸರ್ಕಾರವು 1,000 ಲೋ ಫ್ಲೋರ್ ಬಸ್ ಗಳ ಖರೀದಿ ಮತ್ತು ನಿರ್ವಹಣೆಯಲ್ಲಿ ಅಕ್ರಮ ನಡೆಸಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಸಿಬಿಐ ಭಾನುವಾರ ಎಫ್‌ಐಆರ್ ದಾಖಲಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವಾಲಯದ ಉಲ್ಲೇಖದ ಮೇರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಆದ್ರೆ ದೆಹಲಿ ಸರ್ಕಾರವು ಬಸ್ ಖರೀದಿಯಲ್ಲಿನ ಭ್ರಷ್ಟಾಚಾರದ ಆಪಾದನೆಗಳನ್ನುತಳ್ಳಿಹಾಕಿದೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಿಬಿಐ ಅನ್ನು ಬಳಸಿಕೊಂಡು ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!