2025ರೊಳಗೆ ಕೆಎಸ್‌ಆರ್‌ಟಿಸಿಗೆ 1,000 ಬಸ್‌ಗಳ ಸೇರ್ಪಡೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ‘ಶಕ್ತಿ ಯೋಜನೆ’ಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ. ಮುಂದಿನ ವರ್ಷದೊಳಗೆ ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬಲು 1,000 ಹೊಸ ಬಸ್‌ಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸ ಕರ್ನಾಟಕ ಸಾರಿಗೆ ಬಸ್ಸುಗಳ (ಅಶ್ವಮೇಧ ಕ್ಲಾಸಿಕ್ ಪ್ರಯಾಣದ ಮರುಕಲ್ಪನೆ ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್) ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಈ ವರ್ಷ 1,000 ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದು, ಇಂದು 100 ಬಸ್ಸುಗಳ ಬಿಡುಗಡೆಯಾಗಿದೆ. ರಾಜ್ಯದ ಜನರಿಗೆ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಹಾಗೂ ಬಿಎಂಟಿಸಿ ಸೇರಿದಂತೆ ಒಟ್ಟು 4 ಕಾರ್ಪೋರೇಷನ್‍ಗಳು ಬಸ್ಸುಗಳ ಸೇವೆಯನ್ನು ಒದಗಿಸುತ್ತಿವೆ. ಕಳೆದ ನಾಲ್ಕು ವರ್ಷಗಳಿಂದ ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿರಲಿಲ್ಲ. ಈಗ ನಾವು ಹೊಸ ಬಸ್‌ಗಳ ಸೇರ್ಪಡೆಗೆ ಚಾಲನೆ ನೀಡಿದ್ದೇವೆ ಎಂದರು.

ರಾಜ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಕ.ರ.ಸಾ.ಸಂ ಮತ್ತು ಇತರೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸುತ್ತೇವೆ ಎಂದು ಹೇಳಿದ್ದೆವು. ಬೆಲೆಯೇರಿಕೆ, ಹಣದುಬ್ಬರು, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವ ಪರಿಸ್ಥಿತಿಯಲ್ಲಿ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡಿದ್ದೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!