ವೃತ್ತಿಜೀವನದ 100 ನೇ ಟೆಸ್ಟ್ ಪಂದ್ಯ: ಚೇತೇಶ್ವರ ಪೂಜಾರಗೆ ಶುಭ ಹಾರೈಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಆಸ್ಟ್ರೇಲಿಯಾ (India Vs Australia) ನಡುವಿನ ಎರಡನೇ ಟೆಸ್ಟ್ ಪಂದ್ಯ ದೆಹಲಿಯಲ್ಲಿ ನಡೆಯಲಿದ್ದು, ಈ ಪಂದ್ಯ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ (Cheteshwar Pujara) ಅವರಿಗೆ ವಿಶೇಷವಾಗಿದೆ.

ಯಾಕೆಂದರೆ ಈ ಪಂದ್ಯವು ಅವರ ವೃತ್ತಿಜೀವನದ 100 ನೇ ಟೆಸ್ಟ್ ಆಗಿದೆ. ವಿಶ್ವ ಕ್ರಿಕೆಟ್‌ನಲ್ಲಿ ಕೆಲವೇ ಆಟಗಾರರು 100 ಟೆಸ್ಟ್ ಪಂದ್ಯಗಳ ಹೊಸ್ತಿಲನ್ನು ದಾಟ್ಟಿದ್ದು, ಪೂಜಾರ ಈಗ ಆ ಪಟ್ಟಿಗೆ ಸೇರುವ ಮುಂದಿನ ಬ್ಯಾಟ್ಸ್‌ಮನ್ ಆಗಿದ್ದಾರೆ.

ಇನ್ನು ವಿಶೇಷವೆಂದರೆ ಈ ಐತಿಹಾಸಿಕ ಸಾಧನೆಗಾಗಿ ಪೂಜಾರ ಪ್ರಧಾನಿ ಮೋದಿ (Prime Minister Narendra Modi) ಅವರಿಂದ ಶುಭ ಹಾರೈಕೆಯನ್ನು ಸ್ವೀಕರಿಸಿದ್ದಾರೆ.

100ನೇ ಟೆಸ್ಟ್‌ಗೂ ಮುನ್ನ ಪೂಜಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಪೂಜಾರಗೆ ಮೋದಿ ಅಭಿನಂದನೆ ಸಲ್ಲಿಸಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪ್ರಧಾನಿ ಮೋದಿಯವರೊಂದಿಗಿನ ಭೇಟಿಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೂಜಾರ, ‘ಈ ಕ್ಷಣಗಳು ನನ್ನ ಉತ್ಸಾಹವನ್ನು ಹೆಚ್ಚಿಸಲಿವೆ. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು ನನಗೆ ಗೌರವದ ಸಂಗತಿ ಎಂದು ಬರೆದುಕೊಂಡಿದ್ದಾರೆ.
ಅದಕ್ಕೆ ರೀ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಪೂಜಾರ ಅವರನ್ನು ಭೇಟಿಯಾಗುವುದು ಆಹ್ಲಾದಕರ ಭಾವನೆ. ಅವರ 100ನೇ ಟೆಸ್ಟ್ ಮತ್ತು ವೃತ್ತಿಜೀವನಕ್ಕೆ ನಾನು ಶುಭ ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಚೇತೇಶ್ವರ ಪೂಜಾರ ಟೆಸ್ಟ್ ವೃತ್ತಿಜೀವನ

ಇದುವರೆಗು ಭಾರತದ ಪರ ಪೂಜಾರ 99 ಟೆಸ್ಟ್ ಪಂದ್ಯಗಳನ್ನಾಡಿದ್ದು, ಅದರಲ್ಲಿ 44.15 ಸರಾಸರಿಯಲ್ಲಿ 7021 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 19 ಶತಕ ಮತ್ತು 34 ಅರ್ಧ ಶತಕಗಳನ್ನು ಬಾರಿಸಿದ್ದಾರೆ. 99 ಟೆಸ್ಟ್‌ಗಳಲ್ಲಿ ಅಜೇಯ 206 ರನ್ ಗಳಿಸಿದ್ದು ಪೂಜಾರ ಅವರ ಅತ್ಯಧಿಕ ವೈಯಕ್ತಿಕ ಸ್ಕೋರ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!