ದೇಶದ ಗಡಿಯಲ್ಲಿ ಒಳ ನುಗ್ಗಲು 104- 135 ಉಗ್ರರು ಸಂಚು: ಎಲ್ಲೆಡೆ ಹೈಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಕೆಲವೊಂದು ಭಯೋತ್ಪಾದಕ ಸಂಘಟನೆಗಳಿಂದ ಜೀವ ಬೆದರಿಕೆಯ ಕರೆಗಳು ಬಂದಿದ್ದು, ಈ ಹಿನ್ನೆಲೆ ಜಮ್ಮು-ಕಾಶ್ಮೀರ ಗಡಿಯಲ್ಲಿ ಬಿಎಸ್​ಎಫ್​ ಹದ್ದಿನ ಕಣ್ಣಿಟ್ಟಿದೆ.
ಈ ಕುರಿತು ಮಾಹಿತಿ ನೀಡಿದ ಭದ್ರತಾ ಪಡೆ ಇನ್ಸ್​ಪೆಕ್ಟರ್​​ ಡಿ.ಕೆ ಬೂರಾ, ಕಾಶ್ಮೀರಗಡಿಯಲ್ಲಿ ಈಗಾಗಲೇ ನಿಗಾ ವಹಿಸಲಾಗಿದ್ದು,ಎರಡು ವಾರಗಳ ಕಾಲ ಗಡಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದೇವೆ. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.
ಇತ್ತ ಗಣರಾಜ್ಯೋತ್ಸವ ವೇಳೆ ಜಮ್ಮು-ಕಾಶ್ಮೀರ ಗಡಿಯೊಳಗೆ ನುಗ್ಗಲು 104 ರಿಂದ 135 ಉಗ್ರರು ಸಂಚು ರೂಪಿಸಿದ್ದಾರೆಂದು ಗಡಿ ಭದ್ರತಾ ಪಡೆ ಕಾಶ್ಮೀರ ವಿಭಾಗದ ಇನ್ಸ್​ಪೆಕ್ಟರ್​​ ಜನರಲ್​​ ರಾಜಾ ಬಾಬು ಸಿಂಗ್​​ ತಿಳಿಸಿದ್ದಾರೆ.
2021ರಿಂದಲೂ ಕಣಿವೆ ನಾಡಿನಲ್ಲಿ ಶಾಂತಿ ನೆಲೆಸಿದ್ದು, ಇದೀಗ ಉಗ್ರರು ಗಡಿಯೊಳಗೆ ನುಗ್ಗಲು ಯೋಜನೆ ರೂಪಿಸಿದ್ದಾರೆ. 104 ರಿಂದ 135 ಉಗ್ರರು ಗಡಿಯೊಳಗೆ ನುಸುಳಲು ಯೋಜನೆ ಹಾಕಿಕೊಂಡಿದ್ದಾರೆ ಎಂದು ಗುಪ್ತಚರ ಇಲಾಖೆಯಿಂದ ಮಾಹಿತಿ ಬಂದಿದೆ ಎಂದರು.
ಈಗಾಗಲೇ ದೆಹಲಿಯ ಪ್ರಮುಖ ಸ್ಥಳಗಳಲ್ಲೂ ಪೊಲೀಸರು, ಯೋಧರು ಹೆಚ್ಚಿನ ನಿಗಾ ವಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!