ರಾಜ್ಯದಲ್ಲಿ ಇಂದು 104 ಜನರಿಗೆ ಕೊರೋನಾ ಸೋಂಕು: ಪಾಸಿಟಿವಿಟಿ ದರ 5.93%

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 104 ಜನರಿಗೆ ಕೊರೋನಾ ಸೋಂಕು ಧೃಡವಾಗಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದು 104 ಜನರಿಗೆ ಕೊರೊನಾ ಸೋಂಕು ಧೃಡವಾಗಿದೆ. ಬೆಂಗಳೂರಿನಲ್ಲಿ ಇಂದು 85 ಜನರಿಗೆ ಸೋಂಕು ತಗುಲಿದೆ.

ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 234 ಕ್ಕೆ ಏರಿದೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 271 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 8 ಮಂದಿ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಯಾವುದೇ ಕೋವಿಡ್ ಸಾವಿನ ಬಗ್ಗೆ ವರದಿಯಾಗಿಲ್ಲ, ರಾಜ್ಯದಲ್ಲಿ ಸದ್ಯ ಪಾಸಿಟಿವಿಟಿ ದರ ಶೇ.5.93 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಓರ್ವನಿಗೆ ಸೋಂಕು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಓರ್ವನಿಗೆ ಸೋಂಕು ದೃಢಪಟ್ಟಿದೆ. ಮಂಗಳೂರಿನಲ್ಲಿ ವಾಸವಿರುವ ಹುಬ್ಬಳ್ಳಿ ಮೂಲದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!