ಮಹಿಳಾ ಮತದಾರರಿಗಾಗಿ ಬೆಂಗಳೂರಿನಲ್ಲಿ 104 ಪಿಂಕ್ ಬೂತ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಒಂದೇ ದಿನ ಬಾಕಿ ಇದ್ದು, ಎಲ್ಲ ರೀತಿಯ ತಯಾರಿ ನಡೆಯುತ್ತಿದೆ.

ರಾಜ್ಯಾದ್ಯಂತ ಮತದಾನಕ್ಕೆ ಚುನಾವಣಾ ಬೂತ್‌ಗಳು ತಯಾರಾಗುತ್ತಿವೆ. ಎಲ್ಲೆಡೆ ಪೊಲೀಸ್ ಕಟ್ಟೆಚ್ಚರ ವಹಿಸಿದ್ದಾರೆ. ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸರು ಹಾಗೂ ಚುನಾವಣಾ ಸಿಬ್ಬಂದಿ ತಪಾಸಣೆ ಮಾಡುತ್ತಿದ್ದಾರೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಪಿಂಕ್ ಬೂತ್‌ಗಳು ತಯಾರಾಗಿವೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟಾರೆ 140 ಪಿಂಕ್ ಬೂತ್‌ಗಳಿವೆ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಐದು ಪಿಂಕ್ ಬೂತ್ ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!