JUSTICE | ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 106 ವರ್ಷ ಜೈಲು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

15 ವರ್ಷ ವಯಸ್ಸಿನ ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಗರ್ಭ ಧರಿಸುವಂತೆ ಮಾಡಿದ ವ್ಯಕ್ತಿಗೆ ಕೇರಳ ನ್ಯಾಯಾಲಯವು 106 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.‌ ಈ ಮೂಲಕ ಎಲ್ಲ ಅತ್ಯಾಚಾರಿಗಳ ಕ್ರೂರ ಮನಸ್ಥಿತಿಗೆ ತಕ್ಕ ಪಾಠ ಸಿಕ್ಕಿದೆ.

ಸಂತ್ರಸ್ತೆಯ ತಾಯಿಯ ಸ್ನೇಹಿತನಿಂದ ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. 44 ವರ್ಷದ ವ್ಯಕ್ತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾನೆ. ನಂತರ ಯಾರಿಗಾದರೂ ವಿಷಯ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಬಾಲಕಿಗೆ ದೈಹಿಕ ಸಮಸ್ಯೆಗಳು ಎದುರಾಗಿದೆ. ವೈದ್ಯರ ಬಳಿ ಕರೆದುಕೊಂಡು ಬಂದಾಗ ಆಕೆ ಗರ್ಭಿಣಿ ಎಂದು ಗೊತ್ತಾಗಿದೆ. ನಂತರ ಗರ್ಭಪಾತ ಮಾಡಲಾಗಿದೆ.

ಈ ಪ್ರಕರಣ ದೇವಿಕುಲಂ ಫಾಸ್ಟ್​ ಟ್ರ್ಯಾಕ್​​ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿತ್ತು. ನ್ಯಾಯಾಧೀಶ ಸಿರಾಜುದ್ದೀನ್​​ ಪಿಎ ಸಂತ್ರಸ್ತೆಗೆ ನ್ಯಾಯ ಕೊಡಿಸಿದ್ದಾರೆ. ಆರೋಪಿಗೆ ಪೋಕ್ಸೋ ಕಾಯ್ದೆಯಡಿ 106 ವರ್ಷಗಳ ಜೈಲು ಶಿಕ್ಷೆ ಜೊತೆಗೆ ವಿವಿಧ ಶಿಕ್ಷೆ ವಿಧಿಸಿದ್ದಾರೆ. ಶಿಕ್ಷೆಯನ್ನು ಏಕಕಾಲದಲ್ಲಿ ನೀಡಲಾಗಿದೆ. 22 ವರ್ಷಗಳ ಕಾಲ ಗರಿಷ್ಠ ಜೈಲು ಶಿಕ್ಷೆಯನ್ನು ಅನುಭವಿಸಬೇಕಿದೆ. ಜೊತೆಗೆ ನ್ಯಾಯಾಲಯವು ವ್ಯಕ್ತಿಗೆ 60 ಸಾವಿರ ರೂಪಾಯಿ ದಂಡ ವಿಧಿಸಿದೆ. ಒಂದು ವೇಳೆ ದಂಡ ಪಾವತಿಸದೇ ಇದ್ದಲ್ಲಿ 22 ತಿಂಗಳ ಕಠಿಣ ಸಜೆ ಅನುಭವಿಸಬೇಕು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!