ಮತಗಟ್ಟೆಗೆ ‘ಆನಂದ’: ಖುದ್ದು ಆಗಮಿಸಿ ಹಕ್ಕು ಚಲಾಯಿಸಿದ್ರು 107 ವರ್ಷದ ತರುಣ ಆನಂದ ಆಳ್ವರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅವರ ತಂದೆ, ಶತಾಯುಷಿ (107) ಮಿಜಾರುಗುತ್ತು ಆನಂದ ಆಳ್ವ ಅವರು ಖುದ್ದು ಬಂಗಬೆಟ್ಟು ಪಬ್ಲಿಕ್ ಶಾಲೆಯ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ ನಾಡಿಗೇ ಮಾದರಿಯಾದರು.

80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಲಾಗಿದ್ದರೂ, ಇದನ್ನು ನಿರಾಕರಿಸಿದ್ದ ಆನಂದ ಆಳ್ವರು ತಾವು ಮತಗಟ್ಟೆಗೆ ತೆರಳಿಯೇ ಮತ ಚಲಾಯಿಸುವುದಾಗಿ ಈ ಹಿಂದೆಯೇ ಹೇಳಿದ್ದರು. ಅದರಂತೆ ಇಂದು ಖುದ್ದಾಗಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!