108 ಅಡಿ ಎತ್ತರದ ಹನುಮಾನ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಹನುಮ ಜಯಂತಿ ಹಿನ್ನೆಲೆ ಪ್ರಧಾನಿ ಮೋದಿ ಅವರು ಗುಜರಾತ್​ನ ಮೊರ್ಬಿಯಲ್ಲಿ 108 ಅಡಿ ಎತ್ತರದ ಹನುಮಾನ್ ಪ್ರತಿಮೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪ್ರಧಾನಮಂತ್ರಿ ಕಚೇರಿ, ‘ಹನುಮಾನ್​ಜಿ ಚಾರ್​ಧಾಮ್’ ಪ್ರಾಜೆಕ್ಟ್​ನ ಅಡಿಯಲ್ಲಿ ದೇಶದ ನಾಲ್ಕು ದಿಕ್ಕುಗಳಲ್ಲಿ ನಿರ್ಮಾಣ ಮಾಡಲಾಗುತ್ತಿರುವ ನಾಲ್ಕು ಹನುಮಾನ್ ಪ್ರತಿಮೆಗಳಲ್ಲಿ ಇದು ಎರಡನೇಯದು ಎಂದು ಸ್ಪಷ್ಟಪಡಿಸಿದೆ.
ಶಿಮ್ಲಾದಲ್ಲಿ 2010ರಲ್ಲಿ ಇದೇ ರೀತಿಯ ಭವ್ಯವಾದ ಹನುಮಾನ್ ಪ್ರತಿಮೆ ಅನಾವರಣಗೊಳಿಸಲಾಗಿತ್ತು. ಎರಡನೇ ಪ್ರತಿಮೆಯನ್ನು ಇಂದು ಮೊರ್ಬಿಯಲ್ಲಿ ಸ್ಥಾಪಿಸಲಾಗಿದೆ. ರಾಮೇಶ್ವರಂ ಮತ್ತು ಪಶ್ಚಿಮ ಬಂಗಾಳದಲ್ಲಿ ಇನ್ನೂ ಎರಡು ಪ್ರತಿಮೆಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದರು. ಮೊರ್ಬಿಯಲ್ಲಿರುವ ಬಾಪು ಕೇಶವಾನಂದಜೀ ಅವರ ಆಶ್ರಮದಲ್ಲಿ ಪಶ್ಚಿಮದಲ್ಲಿ ಪ್ರತಿಮೆ ಸ್ಥಾಪಿಸಲಾಗಿದೆ.
ಮೂರನೇ ಪ್ರತಿಮೆಯ ಕೆಲಸವು ದಕ್ಷಿಣದಲ್ಲಿ ರಾಮೇಶ್ವರಂನಲ್ಲಿ ಪ್ರಾರಂಭವಾಗಿದೆ ಎಂದು ಪ್ರಧಾನಿ ಮೋದಿ ಮಾಹಿತಿ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!