Sunday, August 14, 2022

Latest Posts

ಕೊರೋನಾ ಲಸಿಕೆ ಮೊದಲ ಡೋಸ್ ಪಡೆದ ಆರೋಗ್ಯ ಸಚಿವ ಹರ್ಷವರ್ಧನ್ ದಂಪತಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೆಹಲಿಯ ಹಾರ್ಟ್‌ ಆ್ಯಂಡ್ ಲಂಗ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹಾಗೂ ಅವರ ಪತ್ನಿ ಕೋವಿಡ್‌ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡರು.

ಮೊದಲಿಗೆ ಹರ್ಷವರ್ಧನ್ ಅವರ ಪತ್ನಿ ಗೋಯಲ್ ಲಸಿಕೆ ಹಾಕಿಸಿಕೊಂಡರು. ಆನಂತರ  ಸಚಿವರು ಲಸಿಕೆ ಪಡೆದರು.

ಮಾ. 1ರಿಂದ ಆರಂಭವಾಗಿರುವ ಎರಡನೇ ಹಂತದ ಕೊರೋನಾ ಲಸಿಕೆ ಅಭಿಯಾನದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತದೆ. ಹಾಗೆಯೇ, ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ 45 ರಿಂದ 59 ವರ್ಷದೊಳಗಿನ ವ್ಯಕ್ತಿಗಳಿಗೆ ಲಸಿಕೆ ಹಾಕಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss