ಚೀನಾದಲ್ಲಿ ಬಂತು 10ಜಿ: ಎರಡು ಗಂಟೆಯ ಸಿನಿಮಾ ಡೌನ್ಲೋಡ್‌ ಮಾಡೋಕೆ ಒಂದು ನಿಮಿಷ ಸಾಕು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚೀನಾವು ಈಗ ವಿಶ್ವದ ಮೊದಲ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಪರಿಚಯಿಸಿದೆ. ಇದರಿಂದಾಗಿ ಎರಡು ಗಂಟೆ ಅವಧಿಯ ಸಿನಿಮಾವನ್ನು ಬರೀ ಒಂದು ನಿಮಿಷದಲ್ಲಿಯೇ ಡೌನ್‌ಲೋಡ್‌ ಮಾಡಬಹುದಾಗಿದೆ.

ಚೀನಾ ಹಾಗೂ ಹುವೈ ಯುನಿಕಾರ್ನ್ ಜೊತೆ ಜಂಟಿಯಾಗಿ 10ಜಿ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಚೀನಾದ ಹೆಬೈ ಪ್ರಾಂತ್ಯದ ಸುನನ್ ಕೌಂಟಿಯಲ್ಲಿ ಕಾರ್ಯಗತಗೊಳಿಸಿದೆ.

ಭಾರತ ಸೇರಿ ಇತರೆ ದೇಶಗಳು 100 ಎಂಬಿಪಿಎಸ್ ವೇಗದಲ್ಲಿರುವಾಗ, ಚೀನಾ ಕಂಪನಿಗಳು ಇದರಿಂದ 10 ಪಟ್ಟು ವೇಗವನ್ನು ಹೊಂದಿರುವ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಜಾರಿಗೊಳಿಸಿದೆ. 2 ಗಂಟೆಗಳ ಫಿಲ್ಮ್‌ಗಳು ಕೇವಲ 1 ನಿಮಿಷದಲ್ಲಿ ಮಾಡಬಹುದು.

900 ಜಿಬಿಯಷ್ಟು ಭಾರಿ ಫೈಲ್ ಗಳು ಕೆಲವೇ ಸೆಕೆಂಡಲ್ಲಿ ಡೌನ್‌ಲೋಡ್ ಆಗುತ್ತವೆ. ಫೈಬರ್ ಆಪ್ಟಿಕ್ ಆರ್ಕಿಟೆಕ್ಟರ್ ಅನ್ನು ಅಪ್ ಗ್ರೇಡ್ ಮಾಡಿದಾಗ ಸಿಂಗಲ್ ಯೂಸರ್ ಬ್ಯಾಂಡ್‌ವಿಡ್ಸ್ ಅನ್ನು ಸಾಂಪ್ರದಾಯಿಕ ಗಿಗಾಬೈಟ್‌ನಿಂದ 102 ಹಂತಕ್ಕೆ ಕೊಂಡೊಯ್ಯುತ್ತದೆ ಎಂದು ಹೇಳಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!