ನಾಳೆ 10 ನೇ ತರಗತಿ ಫಲಿತಾಂಶ ಪ್ರಕಟ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೇ 8 ರಂದು ಅಂದರೆ ನಾಳೆ ಕರ್ನಾಟಕ SSLC ಫಲಿತಾಂಶ 2023 ಪ್ರಕಟಗೊಳ್ಳಲಿದೆ.

ನಾಳೆ 10 ಗಂಟೆಗೆ SSLC ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶ ಜಾಲಾತಾಣದಲ್ಲಿ ಲಭ್ಯ www.karresults.nic.in ಅಥವಾ ಲಭ್ಯವಾಗಲಿದೆ. ಕರ್ನಾಟಕ SSLC ಬೋರ್ಡ್ ಪರೀಕ್ಷೆಯಲ್ಲಿ ಈ ಬಾರಿ ಒಟ್ಟು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.

ಅಧಿಕೃತ ವೆಬ್‌ಸೈಟ್ www.karresults.nic.in ಗೆ ಭೇಟಿ
ಮುಖಪುಟದಲ್ಲಿ ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ಒತ್ತಿರಿ
ತೆರೆಯುವ ಹೊಸ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿ
ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಟ್ಟುಕೊಳ್ಳಿ

ಕಳೆದ ಬಾರಿ ಅಂದರೆ 2022 ರಲ್ಲಿ, ಒಟ್ಟಾರೆ ಉತ್ತೀರ್ಣ ಶೇಕಡಾ 85.63 ರಷ್ಟು ದಾಖಲಾಗಿತ್ತು. ಇದರಲ್ಲಿ 145 ವಿದ್ಯಾರ್ಥಿಗಳು ಶೇ 100 ಅಂಕ ಗಳಿಸಿದ್ದರು. ಈ ವರ್ಷ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 28ನೇ ಮಾರ್ಚ್‌ನಿಂದ 11ನೇ ಏಪ್ರಿಲ್ 2023 ರವರೆಗೆ ನಡೆದಿತ್ತು. ಏಪ್ರಿಲ್ 17 ರಂದು ಕೀ ಉತ್ತರ ಬಿಡುಗಡೆಯಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!